ಕೇಸ್ ವಾಪಸ್ ತೆಗೆದುಕೊಳ್ಳುವಂತೆ ಸಚಿವ ಮಹದೇವಪ್ಪ ಪುತ್ರನಿಂದ ಬೆದರಿಕೆ: ದೂರುದಾರ
ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ನೋಟಿಸ್ ಪಡೆದಿರುವ ಲೋಕೋಪಯೋಗಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಪುತ್ರ ಸುನಿಲ್ ಬೋಸ್...

ಮೈಸೂರು: ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ನೋಟಿಸ್ ಪಡೆದಿರುವ ಲೋಕೋಪಯೋಗಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಪುತ್ರ ಸುನಿಲ್ ಬೋಸ್ ನ್ಯಾಯಾಲಯದ ವಿಚಾರಣೆಗೆ ಗೈರು ಹಾಜರಾಗಿದ್ದಾರೆ. ಇದರಿಂದ ನ್ಯಾಯಾಧೀಶರು ವಿಚಾರಣೆಯನ್ನು ಆ.4ಕ್ಕೆ ಮುಂದೂಡಿದ್ದಾರೆ.
ತಾವು ನೀಡಿರುವ ದೂರು ವಾಪಸ್ ಪಡೆದುಕೊಳ್ಳುವಂತೆ ಹೇಳಿ ನನಗೆ ಬೆದಗಕೆ ಕರೆಗಳು ಬರುತ್ತಿವೆ. ಜೊತೆಗೆ 10 ಲಕ್ಷ ರು. ಲಂಚದ ಆಮೀಷ ಕೂಡ ನೀಡಲಾಗುತ್ತಿದೆ ಎಂದು ದೂರುದಾರ ಬಸವರಾಜು ಆರೋಪಿಸಿದ್ದಾರೆ. ನನ್ನ ಕಕ್ಷಿದಾರರಿಗೆ ಕೇಸ್ ವಾಪಸ್ ತೆಗೆದುಕೊಳುವಂತೆ ಆಗ್ರಹಿಸಿ ಬೆದರಿಕೆ ಕರೆಗಳು ಬರುತ್ತಿವೆ ಬಸವರಾಜು ಪರ ವಕೀಲ ಲೋಕೇಶ್ ತಿಳಿಸಿದ್ದಾರೆ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಕೆ. ರಾಮೇಶ್ವರಪ್ಪ ಲಕ್ಷ್ಮಿಪುರಂ ಮತ್ತು ಟಿ ನರಸಿಪುರ ಪೊಲೀಸ್ ಠಾಣೆಗಳಲ್ಲಿ ಸುಳ್ಳು ದೂರುಗಳನ್ನು ದಾಖಲಿಸಿದ್ದಾರೆ ಎಂದು ಬಸವರಾಜು ಆರೋಪಿಸಿದ್ದಾರೆ.
ಮರಳು ಪರವಾನಗಿ ನೀಡಲು ಗುತ್ತಿಗೆದಾರರೊಬ್ಬರಿಂದ ಲಂಚ ಪಡೆಯುವಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂ ವಿಜ್ಞಾನಿಗೆ ಪ್ರಚೋದನೆ ನೀಡಿದ್ದಾರೆಂಬ ಆರೋಪ ಎದುರಿಸುತ್ತಿರುವ ಸುನಿಲ್ ಬೋಸ್, ಕೋರ್ಟ್‌ಗೆ ಖುದ್ದು ಹಾಜರಾಗಬೇಕೆಂದು ಪ್ರಕರಣದ ವಿಚಾರಣೆ ನಡೆಸುತ್ತಿರುವ ಮೈಸೂರಿನ 3ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೋಟಿಸ್ ಜಾರಿಗೊಳಿಸಿತ್ತು. ಆದರೆ ಬೋಸ್ ಹಾಜರಾಗಿರಲಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


