ಕಲಬುರಗಿಯಲ್ಲಿ ಪೊಲೀಸ್ ಮುಖ್ಯ ಪೇದೆ ಆತ್ಮಹತ್ಯೆಗೆ ಶರಣು
ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳ ಆತ್ಮಹತ್ಯೆ ಸರಣಿ ಮುಂದುವರೆದಿದ್ದು, ಶುಕ್ರವಾರ ಕಲಬುರಗಿಯಲ್ಲಿ ಪೊಲೀಸ್ ಮುಖ್ಯ ಪೇದೆ...

Published On :
ಕಲಬುರಗಿ: ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳ ಆತ್ಮಹತ್ಯೆ ಸರಣಿ ಮುಂದುವರೆದಿದ್ದು, ಶುಕ್ರವಾರ ಕಲಬುರಗಿಯಲ್ಲಿ ಪೊಲೀಸ್ ಮುಖ್ಯ ಪೇದೆ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇಬ್ಬರು ಡಿವೈಎಸ್ಪಿಗಳ ಆತ್ಮಹತ್ಯೆ ಹಾಗೂ ಓರ್ವ ಮಹಿಳಾ ಪಿಎಸ್ ಐ ಆತ್ಮಹತ್ಯೆ ಪ್ರಕರಣದ ಬೆನ್ನಲ್ಲೇ ಕಲಬುರಗಿಯ ಮೀಸಲು ಪೋಲೀಸ್ ಪಡೆಯ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಅಣ್ಣಾ ರಾವ್(50) ಅವರು ಇಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಗರದ ಹೊರವಲಯದ ತಾಜಸುಲ್ತಾನಪುರ ಕೆಎಸ್ಆರ್‌ಪಿ ಪೊಲೀಸ್ ಕ್ವಾಟರ್ಸ್‌ನಲ್ಲಿ ಅಣ್ಣಾ ರಾವ್ ಅವರು ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಿಜಯಪುರದ ಐಆರ್‌ಬಿ ಬೆಟಾಲಿಯನ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ಅಣ್ಣಾರಾವ್ ಅವರಿಗೆ ವಿಜಯಪುರದಿಂದ ಕಲಬುರಗಿಗೆ ವರ್ಗಾವಣೆ ನೀಡದೇ ಇದ್ದಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಎಸ್ಪಿ ಎನ್ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


