ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ತಾಯಿಯ ರಕ್ಷಣೆ, 3 ಮಕ್ಕಳು ದಾರುಣ ಸಾವು
ತನ್ನ ಮೂರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ತಾಯಿಯನ್ನು ರಕ್ಷಿಸಲಾಗಿದೆ. ಆದರೆ ಆ ಮೂರು ಮಕ್ಕಳು ಮೃತಪಟ್ಟಿರುವ ದಾರುಣ ಘಟನೆ ಬೆಳಗಾವಿ...

Published On :
ಬೆಳಗಾವಿ: ತನ್ನ ಮೂರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ತಾಯಿಯನ್ನು ರಕ್ಷಿಸಲಾಗಿದೆ. ಆದರೆ ಆ ಮೂರು ಮಕ್ಕಳು ಮೃತಪಟ್ಟಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ರಾಯದುರ್ಗ ತಾಲೂಕಿನ ಹುಲಕುಂದ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪತಿಯ ಕಿರುಕುಳದಿಂದ ಬೇಸತ್ತ 35 ವರ್ಷದ ಶಾಂತಮ್ಮ ಇಂದು ಬೆಳಗ್ಗೆ ತನ್ನು ಮೂವರು ಮಕ್ಕಳೊಂದಿಗೆ ಮನೆಯ ಬಳಿಯಿರುವ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಈ ವೇಳೆ ಮೂರೂ ಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ಆದರೆ ತಾಯಿಯನ್ನು ನೆರೆ ಹೊರೆಯವರು ರಕ್ಷಿಸಿದ್ದಾರೆ.
ಮೃತ ಮಕ್ಕಳನ್ನು ರಾಧಿಕಾ (5), ಸಂಜನಾ (4) ಹಾಗೂ ರಮೇಶ(2) ಎಂದು ಗುರುತಿಸಲಾಗಿದೆ.
ಕಡಕೋಳ ಪೊಲಿಸರು ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


