ರಾಜ್ಯ

ಬೆಂಗಳೂರಿನಲ್ಲಿ "ಕಬಾಲಿ" ವಿರುದ್ಧ ಪ್ರತಿಭಟನೆ; ಕನ್ನಡಪರ ಸಂಘಟನೆಗಳಿಗೆ ವಾಟಾಳ್ ನೇತೃತ್ವ

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಬಹು ನಿರೀಕ್ಷಿತ ಚಿತ್ರಕ್ಕೆ ಅಭಿಮಾನಿಗಳಿಂಗ ಅಭೂತಪೂರ್ವ ಸ್ವಾಗತದ ಬೆನ್ನಲ್ಲೇ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ಬಿಸಿ ಕೂಡ ತಟ್ಟಿದೆ.

ಬೆಂಗಳೂರಿನಲ್ಲಿ "ಕಬಾಲಿ" ವಿರುದ್ಧ ಪ್ರತಿಭಟನೆ; ಕನ್ನಡಪರ ಸಂಘಟನೆಗಳಿಗೆ ವಾಟಾಳ್ ನೇತೃತ್ವ
ಬೆಂಗಳೂರಿನಲ್ಲಿ ರಜನಿಕಾಂತ್ ವಿರುದ್ಧ ಪ್ರತಿಭಟನೆ (ಸಂಗ್ರಹ ಚಿತ್ರ)
Published On :

ಬೆಂಗಳೂರು: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಬಹು ನಿರೀಕ್ಷಿತ ಚಿತ್ರಕ್ಕೆ ಅಭಿಮಾನಿಗಳಿಂಗ ಅಭೂತಪೂರ್ವ ಸ್ವಾಗತದ ಬೆನ್ನಲ್ಲೇ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ಬಿಸಿ  ಕೂಡ ಶುರುವಾಗಿದೆ.

ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಏಕಕಾಲದಲ್ಲಿ ಕಬಾಲಿ ಚಿತ್ರ ತೆರೆಕಂಡಿರುವ ಹಿನ್ನಲೆಯಲ್ಲಿ ಕನ್ನಡಪರ ಹೋರಾಟಗಾರರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಕನ್ನಡ  ಚಳುವಳಿ ವಾಟಾಳ್ ಪಕ್ಷದ ಮುಖ್ಯಸ್ಥ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಕಾವೇರಿ ವಿಚಾರದಲ್ಲಿ ಕರ್ನಾಟಕದ ಪರ ರಜನಿಕಾಂತ್ ನಿಲ್ಲಲ್ಲಿಲ್ಲ  ಎಂದು ವಾಟಾಳ್ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತೊಂದೆಡೆ ವಾಟಾಳ್ ನಾಗರಾಜ್ ಅವರ ಪ್ರತಿಭಟನೆಗೆ ರಜನಿಕಾಂತ್ ಅಭಿಮಾನಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಪ್ರತಿಭಟನೆಗೆ ರಜನಿ ಅಭಿಮಾನಿಗಳು ಅಡ್ಡಿ ಪಡಿಸಿದ ಹಿನ್ನಲೆಯಲ್ಲಿ  ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಕನ್ನಡ ಪರ ಹೋರಾಟಗಾರರು ಮತ್ತು ರಜನಿ ಅಭಿಮಾನಗಳ ನಡುವೆ ಮಾತಿನ ಚಕಮಕಿ ಕೂಡ ನಡೆಯಿತು. ಸ್ಥಳದಲ್ಲಿದ್ದ  ಪೊಲೀಸರು ಲಘು ಲಾಠಿ ಪ್ರಹಾರ ಮಾಡಿ ಗುಂಪನ್ನು ಚುದುರಿಸಿದ ಬಳಿಕ ಪರಿಸ್ಥಿತಿ ತಿಳಿಗೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.