ರಾಜ್ಯ

ಗಣಪತಿ ಆತ್ಮಹತ್ಯೆ ಪ್ರಕರಣ, ಐಪಿಎಸ್ ಅಧಿಕಾರಿಗಳಿಗೆ ತನಿಖೆ ಎದುರಿಸಲು ಏನು ಕಷ್ಟ: ಹೈಕೋರ್ಟ್

ಕೆ.ಜೆ.ಜಾರ್ಜ್‌ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸುತ್ತಿರುವಾಗ ಹಿರಿಯ ಪೊಲೀಸ್‌ ಅಧಿಕಾರಿಗಳಾದ ಪ್ರಣವ್‌ ಮೊಹಾಂತಿ ಹಾಗೂ ಎ.ಎಂ.ಪ್ರಸಾದ್‌ ಅವರಿಗೆ ತನಿಖೆ ಎದುರಿಸಲು ಏನು ...

ಗಣಪತಿ ಆತ್ಮಹತ್ಯೆ ಪ್ರಕರಣ, ಐಪಿಎಸ್ ಅಧಿಕಾರಿಗಳಿಗೆ ತನಿಖೆ ಎದುರಿಸಲು ಏನು ಕಷ್ಟ: ಹೈಕೋರ್ಟ್
ಹೈಕೋರ್ಟ್
Published On :

ಬೆಂಗಳೂರು: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿಯ ಜೆಎಂಎಫ್‌ಸಿ ಕೋರ್ಟ್‌ ನಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಲು ಆದೇಶಿಸಿರುವುದನ್ನು ರದ್ದುಪಡಿಸಬೇಕು ಎಂದು ಕೋರಿರುವ ಐಜಿಪಿ ಪ್ರಣವ್‌ ಮೊಹಾಂತಿ ಮತ್ತು ಎಡಿಜಿಪಿ ಎ.ಎಂ.ಪ್ರಸಾದ್‌ ಸಲ್ಲಿಸಿರುವ ರಿಟ್‌ ಅರ್ಜಿಯನ್ನು  ನ್ಯಾಯಮೂರ್ತಿ ಆನಂದ ಬೈರಾರೆಡ್ಡಿ ಅವರಿದ್ದ ಏಕಸದಸ್ಯ ನ್ಯಾಯಪೀಠವು ಮಂಗಳವಾರ ವಿಚಾರಣೆ ನಡೆಸಿತು.

ಈ ವೇಳೆ ಅರ್ಜಿದಾರರ ಪರ ಹಾಜರಾಗಿದ್ದ  ಹಿರಿಯ ವಕೀಲ ಸಿ.ವಿ.ನಾಗೇಶ್‌, ಅರ್ಜಿದಾರರ ವಿರುದ್ಧ ಮಡಿಕೇರಿ ಜೆಎಂಎಫ್‌ಸಿ ಮ್ಯಾಜಿಸ್ಟ್ರೇಟ್‌ ಆದೇಶ ಅಸಮಂಜಸವಾಗಿದೆ ಎಂದು ದೂರಿದರು.

ಕೆ.ಜೆ.ಜಾರ್ಜ್‌ ಸಚಿವ  ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸುತ್ತಿರುವಾಗ ಹಿರಿಯ ಪೊಲೀಸ್‌ ಅಧಿಕಾರಿಗಳಾದ ಪ್ರಣವ್‌ ಮೊಹಾಂತಿ ಹಾಗೂ ಎ.ಎಂ.ಪ್ರಸಾದ್‌ ಅವರಿಗೆ  ತನಿಖೆ ಎದುರಿಸಲು ಏನು ಕಷ್ಟ  ಎಂದು ಹೈಕೋರ್ಟ್‌ ಪ್ರಶ್ನಿಸಿದೆ. ಐಜಿಪಿ ಪ್ರಣವ್‌ ಮೊಹಾಂತಿ ಹಾಗೂ ರಾಜ್ಯ ಗುಪ್ತಚರ ವಿಭಾಗದ ಎಡಿಜಿಪಿ ಎ.ಎಂ.ಪ್ರಸಾದ್ ಇಬ್ಬರೂ ಪ್ರಾಮಾಣಿಕ ಅಧಿಕಾರಿಗಳಾಗಿದ್ದರೆ ತನಿಖೆಗೆ ಯಾಕೆ ಹೆದರುತ್ತಿದ್ದಾರೆ  ಎಂದು ಪ್ರಶ್ನಿಸಿದ್ದಾರೆ.

ತನ್ನ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಮಗ ದೂರು ದಾಖಲಿಸಿದ್ದಾನೆ, ಎಂಬುದು ಇಡೀ ಪ್ರಪಂಚಕ್ಕೆ ತಿಳಿದಿದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.