"ಮಹಾದಾಯಿ" ಬಂದ್: ಕಾಮಗಾರಿ ಪ್ರದೇಶಕ್ಕೆ ಪ್ರವೇಶ ನಿರ್ಬಂಧ
ಮಹಾದಾಯಿ ನ್ಯಾಯಾಧಿಕರಣ ತೀರ್ಪಿನ ಉತ್ತರ ಕರ್ನಾಟಕದಲ್ಲಿ ಆಕ್ರೋಶ ಭುಗಿಲೆದ್ದ ಕಾರಣ ಕಳಸಾ ನಾಲೆಯ ಕಾಮಗಾರಿ ಪ್ರದೇಶಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ.

ಬೆಳಗಾವಿ: ಮಹಾದಾಯಿ ನ್ಯಾಯಾಧಿಕರಣ ತೀರ್ಪಿನ ಉತ್ತರ ಕರ್ನಾಟಕದಲ್ಲಿ ಆಕ್ರೋಶ ಭುಗಿಲೆದ್ದ ಕಾರಣ ಕಳಸಾ ನಾಲೆಯ ಕಾಮಗಾರಿ ಪ್ರದೇಶಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ.
ಬೆಳಗಾವಿ ಜಿಲ್ಲೆ ಖಾನಾಪುರ ತಾಲ್ಲೂಕಿನ ಕಣಕುಂಬಿ ಗ್ರಾಮದ ದೇವಸ್ಥಾನದಿಂದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದ ಹಿಂಭಾಗದವರೆಗಿನ ಕಳಸಾ ನಾಲೆ ಕಾಮಗಾರಿ ನಡೆಯುತ್ತಿರುವ ಸ್ಥಳ ಹಾಗೂ ಅದರ ದಂಡೆಯ ಸುತ್ತಮುತ್ತಲಿನ ಸುಮಾರು 1 ಕಿ.ಮೀ. ವ್ಯಾಪ್ತಿಯೊಳಗಿನ ಪ್ರದೇಶದಲ್ಲಿ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಎನ್. ಜಯರಾಮ್ ಆದೇಶ ಹೊರಡಿಸಿದ್ದಾರೆ.
ಇದೇ ವೇಳೆ ಉತ್ತರ ಕರ್ನಾಟಕ ಬಂದ್ ಗೆ ಕರೆ ನೀಡಿರುವ ರೈತಪರ ಸಂಘಟನೆಗಳು ಹಾಗೂ ಕನ್ನಡಪರ ಸಂಘಟನೆಗಳು ಕಾಮಗಾರಿ ಪ್ರದೇಶಕ್ಕೆ ಮುತ್ತಿಗೆ ಹಾಕುವ ಭೀತಿ ಎದುರಾಗಿದ್ದು, ಈ ಪ್ರದೇಶದಲ್ಲಿ ವ್ಯಾಪಕ ಭದ್ರತೆ ಒದಗಿಸಲಾಗಿದೆ.
ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಹಲವೆಡೆ ಲಾಠಿ ಪ್ರಹಾರ
ಇಂದು ನಡೆಯುತ್ತಿರುವ ಬಂದ್ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದು ಗದಗ ಜಿಲ್ಲೆಯ ಬೆಟಗೇರಿ ಪ್ರದೇಶದಲ್ಲಿ ಕೆಲಕಾಲ ಪ್ರಕ್ಷುಬ್ಧ ವಾತಾವರಣೆ ನೆಲೆಸಿತ್ತು. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಬೇಕಾಯಿತು. ನವಲಗುಂದದ ಹುಬ್ಬಳ್ಳಿ ರಸ್ತೆ ಬಳಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಪ್ರತಿಭಟನಾಕರರು ರಸ್ತೆ ಬಂದ್ ಮಾಡಿ ನಡುರಸ್ತೆಯಲ್ಲೇ ಟೈರ್ ಗೆ ಬೆಂಕಿ ಹಚ್ಚಲು ಯತ್ನಿಸಿದರು. ಈ ವೇಳೆ ಪೊಲೀಸರು ತಡೆಯಲೆತ್ನಿಸಿದಾಗ ವಾಗ್ವಾದ ನಡೆದು ಲಾಠಿ ಪ್ರಹಾರ ನಡೆಸಲಾಯಿತು. ಘಟನೆಯಲ್ಲಿ ಇಬ್ಬರು ರೈತರು, ಪತ್ರಕರ್ತರು ಅಸ್ವಸ್ಥಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


