ರಾಜಭವನಕ್ಕೆ ಕರವೇ ಮುತ್ತಿಗೆ; ಪೊಲೀಸರಿಂದ ಕಾರ್ಯಕರ್ತರ ಬಂಧನ
ಮಹದಾಯಿ ತೀರ್ಪು ವಿರೋಧಿಸಿ ಕನ್ನಡಪರ ಹೋರಾಟಗಾರರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಶನಿವಾರ ಬೆಳಗ್ಗೆ ಪ್ರತಿಭಟನಾನಿರತರು ರಾಜಭವನಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದಾರೆ.

ಬೆಂಗಳೂರು: ಮಹದಾಯಿ ತೀರ್ಪು ವಿರೋಧಿಸಿ ಕನ್ನಡಪರ ಹೋರಾಟಗಾರರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಶನಿವಾರ ಬೆಳಗ್ಗೆ ಪ್ರತಿಭಟನಾನಿರತರು ರಾಜಭವನಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದಾರೆ.
ಈ ವೇಳೆ ರಾಜಭವನದ ಬಳಿ ದೊಡ್ಡ ಹೈ ಡ್ರಾಮವೇ ನಡೆದಿದ್ದು, ಅಪಾರ ಪ್ರಮಾಣದ ಕರವೇ ಕಾರ್ಯಕರ್ತರು ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಇದೇ ಸಂದರ್ಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಹೊರಗೆ ತೆರಳುತ್ತಿದ್ದರು. ಇದನ್ನೇ ಕಾಯುತ್ತಿದ್ದ ಕಾರ್ಯಕರ್ತರು ರಾಜ್ಯಪಾಲರನ್ನು ತಡೆಯಲೆತ್ನಿಸಿದ್ದು, ಪೊಲೀಸರ ಸಮಯ ಪ್ರಜ್ಞೆಯಿಂದಾಗಿ ಆಗಬಹುದಾಗಿದ್ದ ಅನಾಹುತ ತಪ್ಪಿದಂತಾಗಿದೆ.
ಕರ್ನಾಟಕ ಬಂದ್ ಮತ್ತು ಕನ್ನಡಪರ ಸಂಘಟನೆಗಳು ರಾಜಭವನದ ಬಳಿ ಪ್ರತಿಭಟನೆ ನಡೆಸುವ ಕುರಿತು ಶಂಕೆಯಿಂದಲೇ ಇಂದು ರಾಜಭವನದ ಆವರಣದಲ್ಲಿ ಹೆಚ್ಚು ಪೊಲೀಸ್ ಭದ್ರತೆ ನಿಯೋಜಿಸಲಾಗಿತ್ತು. ಡಿಸಿಪಿ ಸಂದೀಪ್ ಪಾಟೀಲ್ ನೇತೃತ್ವದ ಪೊಲೀಸರ ತಂಡ ಪ್ರತಿಭಟನಾಕಾರರನ್ನು ನಿಯಂತ್ರಿಸಿದ್ದಷ್ಟೇ ಅಲ್ಲದೆ ಅವರನ್ನು ವಶಕ್ಕೆ ಪಡೆದಿದ್ದಾರೆ. ಬಿಎಂಟಿಸ್ ಬಸ್ ನಲ್ಲಿ ಮಹಿಳಾ ಕಾರ್ಯಕರ್ತರು ಸೇರಿದಂತೆ ಉದ್ರಿಕ್ತ ಕರವೇ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಇದಾದ ಕೆಲವೇ ಕ್ಷಣಗಳಲ್ಲಿ ರಾಜ್ಯಪಾಲರು ತಮ್ಮ ಎಸ್ಕಾರ್ಟ್ ವಾಹನದೊಂದಿಗೆ ರಾಜಭವನದಿಂದ ಹೊರಗೆ ತೆರಳಿದರು.
ಬಂದ್ ಹಿನ್ನಲೆಯಲ್ಲಿ ರಾಜ್ಯಪಾಲರಿಗೆ ನೀಡಿರುವ ಭದ್ರತೆಯನ್ನು ಕೂಡ ಹೆಚ್ಚಿಸಲಾಗಿತ್ತು. ಹೆಚ್ಚುವರಿ ಪೊಲೀಸರು ಮತ್ತು ಹೆಚ್ಚುವರಿ ಭದ್ರತಾ ವಾಹನಗಳನ್ನು ರಾಜ್ಯಪಾಲರ ಭದ್ರತೆಗಾಗಿ ನಿಯೋಜಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


