ಕರ್ನಾಟಕ ಬಂದ್: ಆಸ್ತಿ-ಪಾಸ್ತಿಗೆ, ಶಾಂತಿಗೆ ಧಕ್ಕೆಯಾದರೆ ಕಠಿಣ ಕ್ರಮ: ಪರಮೇಶ್ವರ್ ಎಚ್ಚರಿಕೆ
ಮಹದಾಯಿ ನ್ಯಾಯಾಧಿಕರಣದ ತೀರ್ಪು ವಿರೋಧಿಸಿ ಕನ್ನಡಪರ ಸಂಘಟನೆಗಳು ನಡೆಸುತ್ತಿರುವ ಮುಷ್ಕರದ ವೇಳೆ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಬಂದರೆ ಖಂಡಿತ ಕಠಿಣ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರು: ಮಹದಾಯಿ ನ್ಯಾಯಾಧಿಕರಣದ ತೀರ್ಪು ವಿರೋಧಿಸಿ ಕನ್ನಡಪರ ಸಂಘಟನೆಗಳು ನಡೆಸುತ್ತಿರುವ ಮುಷ್ಕರದ ವೇಳೆ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಬಂದರೆ ಖಂಡಿತ ಕಠಿಣ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಪರಮೇಶ್ವರ ಅವರು, ಮಹದಾಯಿ ನ್ಯಾಯಾಧಿಕರಣ ವಿರೋಧಿಸಿ ಕನ್ನಡ ಪರ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ಶಾಂತಿಯುತವಾಗಿರಬೇಕು. ಯಾವುದೇ ಕಾರಣಕ್ಕೂ ಸಾರ್ವಜನಿಕರಿಗೆ ತೊಂದರೆ ನೀಡುವ ಅಥವಾ ಶಾಂತಿ ಕದಡುವ ಪ್ರಚೋದನೆಗಳಿಗೆ ಆಸ್ಪದ ನೀಡುವುದಿಲ್ಲ. ಅಂತಹ ಪರಿಸ್ಥಿತಿ ಕಂಡುಬಂದರೆ ಖಂಡಿತಾ ಕಾನೂನು ರೀತ್ಯ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಕರ್ನಾಟಕ ಬಂದ್ ನಿಮಿತ್ತ ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಪರಮೇಶ್ವರ ಅವರು ಮುಷ್ಕರದ ವೇಳೆ ಕಟ್ಟೆಚ್ಚರಿಂದ ಇರುವಂತೆ ಪೊಲೀಸರಿಗೆ ಸೂಚಿಸಿದ್ದಾರೆ. ಅಂತೆಯೇ ಮುಷ್ಕರದ ವೇಳೆ ಸ್ಥಳದಲ್ಲೇ ಇದ್ದು ಪರಿಸ್ಥಿತಿ ನಿಯಂತ್ರಿಸುವಂತೆ ಮತ್ತು ಅಗತ್ಯ ಬಿದ್ದರೆ ಹೆಚ್ಚುವರಿ ಪಡೆಗಳನ್ನು ಬಳಿಸಿಕೊಳ್ಳುವಂತೆ ಹೇಳಿದ್ದಾರೆ. ಇದೇ ವೇಳೆ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಮತ್ತು ಸರ್ಕಾರಿ ಕಚೇರಿಗಳಿಗೆ ಹಾನಿ ಮಾಡದಂತೆ ಮನವಿ ಮಾಡಿರುವ ಪರಮೇಶ್ವರ ಅವರು, ಅಂತಹ ಪ್ರಕರಣಗಳೇನಾದರೂ ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


