ಬೆಂಗಳೂರು: ತ್ರಿಕೋನ ಪ್ರೇಮಕ್ಕೆ ಯುವಕ ಬಲಿ, ಓರ್ವನ ಬಂಧನ
ಪ್ರೇಮ ಪ್ರಕರಣ ಸಂಬಂಧ 26 ವರ್ಷದ ವ್ಯಕ್ತಿಯನ್ನು ಅಪಹರಿಸಿ ಕೊಲೆ ಮಾಡಿರುವ ಘಟನೆ ಜಯನಗರದಲ್ಲಿ ನಡೆದಿದೆ...

ಬೆಂಗಳೂರು: ಪ್ರೇಮ ಪ್ರಕರಣ ಸಂಬಂಧ 26 ವರ್ಷದ ವ್ಯಕ್ತಿಯನ್ನು ಅಪಹರಿಸಿ ಕೊಲೆ ಮಾಡಿರುವ ಘಟನೆ ಜಯನಗರದಲ್ಲಿ ನಡೆದಿದೆ.
ಚನ್ನಪಟ್ಟಣ ತಾಲೂಕು ಕೋಲೂರು ಗ್ರಾಮದ ಯೋಗೇಶ್ ಕೊಲೆಯಾದ ಯುವಕ. ಕೊಲೆ ಸಂಬಂಧ ಗೋರಕ್ಷಣಾ ಸಮಿತಿ ಅಧ್ಯಕ್ಷ ಶಿವಕುಮಾರ್ ಪುತ್ರ ಪ್ರತಾಪ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಯೋಗೇಶ್ ರಿಯಲ್ ಎಸ್ಟೇಟ್ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಬಂಧಿತ ಪ್ರತಾಪ್ ಮಾಗಡಿಯ ಅತ್ತಿನಗೆರೆ ಗ್ರಾಮದವನು. ಮೃತ ಯೋಗೇಶ್ ಜಯನಗರದ ತನ್ನ ಹಿರಿಯ ಅಕ್ಕನ ಮನೆಯಲ್ಲಿ ವಾಸವಾಗಿದ್ದನು.
ಜುಲೈ 19 ರಂದು ಕೆಲಸಕ್ಕೆ ತೆರಳಿದ ಯೋಗೇಶ್ ವಾಪಸ್ ಮನೆಗೆ ಬಂದಿರಲಿಲ್ಲ. ಎರಡು ದಿನದ ನಂತರ ಯೋಗೇಶ್ ಸಹೋದರಿ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ನಂತರ ಯೋಗೇಶ್ ಗೆ ಮೈಸೂರಿನ ಯುವತಿಯೋರ್ವಳ ಜೊತೆ ಪ್ರೇಮ ಸಂಬಂಧವಿದ್ದುದ್ದಾಗಿ ಆಕೆ ಪೊಲೀಸರಿಗೆ ತಿಳಿಸಿದ್ದಾರೆ. ಪೊಲೀಸರು ಆ ಯುವತಿಯನ್ನು ವಿಚಾರಣೆ ನಡೆಸಿದಾಗ ಪ್ರತಾಪ್ ನ ಬಗ್ಗೆ ಆಕೆ ಮಾಹಿತಿ ಬಹಿರಂಗ ಪಡಿಸಿದ್ದಾಳೆ.
ಪ್ರತಾಪ್ ಮೈಸೂರಿನ ಯುವತಿಯನ್ನು ಪ್ರೀತಿಸುತ್ತಿದ್ದು, ಆಕೆಯಿಂದ ದೂರ ಉಳಿಯುವಂತೆ ಯೋಗೇಶ್ ಗೆ ಎಚ್ಚರಿಕೆ ನೀಡಿದ್ದ. ಜುಲೈ 10 ರಂದು ಯೋಗೇಶ್ ಕಚೇರಿಗೆ ತೆರಳುತ್ತಿದ್ದ ವೇಳೆ ಆತನನ್ನು ಅಪಹರಿಸಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


