ಬೆಂಗಳೂರಿಗೆ ಆಗಮಿಸಿದ ರಾಕೇಶ್ ಸಿದ್ದರಾಮಯ್ಯ ಪಾರ್ಥೀವ ಶರೀರ
ಅನಾರೋಗ್ಯದಿಂದಾಗಿ ಬೆಲ್ಜಿಯಂನಲ್ಲಿ ಮೃತರಾದ ರಾಕೇಶ್ ಸಿದ್ದರಾಮಯ್ಯ ಅವರ ಪಾರ್ಥೀವ ಶರೀರ ಬೆಂಗಳೂರಿಗೆ ಆಗಮಿಸಿದ್ದು, ಈ ವೇಳೆ ವಿವಿಧ ಗಣ್ಯರು ವಿಮಾನ ನಿಲ್ದಾಣದಲ್ಲಿ ಉಪಸ್ಥಿತರಿದ್ದರು.

ಬೆಂಗಳೂರು: ಅನಾರೋಗ್ಯದಿಂದಾಗಿ ಬೆಲ್ಜಿಯಂನಲ್ಲಿ ಮೃತರಾದ ರಾಕೇಶ್ ಸಿದ್ದರಾಮಯ್ಯ ಅವರ ಪಾರ್ಥೀವ ಶರೀರ ಬೆಂಗಳೂರಿಗೆ ಆಗಮಿಸಿದ್ದು, ಈ ವೇಳೆ ವಿವಿಧ ಗಣ್ಯರು ವಿಮಾನ ನಿಲ್ದಾಣದಲ್ಲಿ ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಸದಸ್ಯರು ರಾಕೇಶ್ ಪಾರ್ಥೀವ ಶರೀರದೊಂದಿಗೆ ಆಗಮಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಾಲಯ್ಯ, ಚಾಮರಾಜಪೇಟೆ ಜೆಡಿಎಸ್ ಶಾಸಕ ಬಿ ಝಡ್ ಜಮೀರ್ ಅಹ್ಮದ್ ಖಾನ್ ಹಾಗೂ ಶಾಸಕ ಚೆಲುವರಾಯ ಸ್ವಾಮಿ, ಅಖಂಡ ಶ್ರೀನಿವಾಸ ಮೂರ್ತಿ ಉಪಸ್ಥಿತರಿದ್ದರು.
ಬೆಳಗ್ಗೆ 9.15ಕ್ಕೆ ಪಾರ್ಥೀವ ಶರೀರ ಬೆಲ್ಜಿಯಂ ನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, 9.30ಕ್ಕೆ ವಿಶೇಷ ವಿಮಾನದ ಮೂಲಕ ಮೈಸೂರಿಗೆ ರವಾನೆ ಮಾಡಲಾಗುತ್ತದೆ. ಬೆಳಗ್ಗೆ 10.30ಕ್ಕೆ ಮೈಸೂರಿಗೆ ಆಗಮಿಸುವ ಪಾರ್ಥೀವ ಶರೀರವನ್ನು ನೇರವಾಗಿ ಮೈಸೂರಿನ ದಸರಾ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣಕ್ಕೆ ತೆಗೆದುಕೊಂಡು ಬರಲಾಗುತ್ತದೆ.
ಬಳಿಕ ಅಲ್ಲಿ ಮಧ್ಯಾಹ್ನ 1.30ರವರೆಗೆ ಸಾರ್ವಜನಿಕ ದರ್ಶನಕ್ಕೆ ಇಟ್ಟು ಬಳಿಕ ಟಿ.ಕಾಟೂರಿನಲ್ಲಿರುವ ಫಾರಂ ಹೌಸ್ ನಲ್ಲಿ ಅಂತಿಮ ವಿಧಿವಿಧಾನ ನಡೆಸಲಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


