ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಎಸ್ ಡಿಎಂಸಿ ಮಾಜಿ ಅಧ್ಯಕ್ಷನಿಗೆ ಜೀವನಪರ್ಯಂತ ಜೈಲು ಶಿಕ್ಷೆ
14 ವರ್ಷದ ಬಾಲಕಿ ಮೇಲೆ ಎರಡು ವರ್ಷಗಳ ಕಾಲ ನಿರಂತರ ಅತ್ಯಾಚಾರ ಎಸಗಿದ ಆರೋಪ ಸಾಬೀತಾಗಿದ್ದು, ಅಪರಾಧಿ ಶಾಲಾ ಅಭಿವೃದ್ಧಿ...

Published On :
ಬೀದರ್: 14 ವರ್ಷದ ಬಾಲಕಿ ಮೇಲೆ ಎರಡು ವರ್ಷಗಳ ಕಾಲ ನಿರಂತರ ಅತ್ಯಾಚಾರ ಎಸಗಿದ ಆರೋಪ ಸಾಬೀತಾಗಿದ್ದು, ಅಪರಾಧಿ ಶಾಲಾ ಅಭಿವೃದ್ಧಿ ಸಮಿತಿ(ಎಸ್ ಡಿಎಂಸಿ) ಅಧ್ಯಕ್ಷ ಮಾರುತಿ ತಾರೆಗೆ ಜಿಲ್ಲಾ ಕೋರ್ಟ್ ಸಾಯುವವರೆಗೂ ಜೈಲು ಶಿಕ್ಷೆ ವಿಧಿಸಿದೆ.
2012ರಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಸಿದ ಬೀದರ್ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಕಾಮುಕನಿಗೆ ಸಾಯುವವರೆಗೆ ಜೈಲು ಶಿಕ್ಷೆ ಹಾಗೂ 5 ಲಕ್ಷ ರುಪಾಯಿ ದಂಡ ವಿಧಿಸಿದೆ. ದಂಡದ ಹಣವನ್ನು ಸಂತ್ರಸ್ಥೆಗೆ ನೀಡುವಂತೆ ಕೋರ್ಟ್ ಸೂಚಿಸಿದೆ. ಅಲ್ಲದೆ ಅಪರಾಧಿಯ ಆಸ್ತಿ ಮಾರಿಯಾದರೂ ಸಂತ್ರಸ್ಥೆಗೆ ಪರಿಹಾರ ನೀಡುವಂತೆ ಆದೇಶಿಸಿದೆ.
ಮಾರುತಿ ತಾರೆ ಎಸ್ ಡಿಎಂಸಿ ಅಧ್ಯಕ್ಷನಾಗಿದ್ದಾಗ ಬಾಲಕಿಯನ್ನು ಬೆದರಿಸಿ ಎರಡು ವರ್ಷಗಳ ಕಾಲ ನಿರಂತರ ಅತ್ಯಾಚಾರ ಎಸಗಿದ್ದ. ಅಲ್ಲದೆ 8 ಬಾರಿ ಗರ್ಭಪಾತವನ್ನೂ ಮಾಡಿಸಿದ್ದ. ಈ ಸಂಬಂಧ ಔರಾದ್ ಪೊಲೀಸ್ ಠಾಣಾ ಪ್ರಕರಣ ದಾಖಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


