ರಾಜ್ಯ

ರಾಮಚಂದ್ರಾಪುರ ಮಠದಲ್ಲಿ ಶ್ರೀಗಳ ಪರ-ವಿರೋಧ ಪ್ರತಿಭಟನೆ; ಪೊಲೀಸರ ನಿಯೋಜನೆ

ಶಿವಮೊಗ್ಗ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮಿಗಳು ಅತ್ಯಾಚಾರ ಆರೋಪ ಎದುರಿಸುತ್ತಿರುವುದರಿಂದ ಶ್ರೀಗಳು...

ರಾಮಚಂದ್ರಾಪುರ ಮಠದಲ್ಲಿ ಶ್ರೀಗಳ ಪರ-ವಿರೋಧ ಪ್ರತಿಭಟನೆ; ಪೊಲೀಸರ ನಿಯೋಜನೆ
ರಾಘವೇಶ್ವರ ಶ್ರೀ
Published On :

ಸಾಗರ(ಶಿವಮೊಗ್ಗ): ಶಿವಮೊಗ್ಗ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮಿಗಳು ಅತ್ಯಾಚಾರ ಆರೋಪ ಎದುರಿಸುತ್ತಿರುವುದರಿಂದ ಶ್ರೀಗಳು ಪೀಠ ತ್ಯಾಗ ಮಾಡಬೇಕೆಂದು ಒತ್ತಾಯಿಸಿ ಸಮಾನ ಮನಸ್ಕರ ವೇದಿಕೆ ಕರೆದಿದ್ದ ಸಭೆಗೆ ಶ್ರೀಗಳ ಪರ ಭಕ್ತರು ವಿರೋಧ ವ್ಯಕ್ತಪಡಿಸಿದ್ದರಿಂದ ಮಾತಿನ ಚಕಮಕಿ, ಗುಂಪು ಗಲಭೆ ನಡೆದ ಘಟನೆ ನಡೆದಿದೆ.

ಶ್ರೀಗಳ ವಿರುದ್ಧ ಸಮಾನ ಮನಸ್ಕರ ವೇದಿಕೆ ಇಂದು ಸಾಗರದ ಬ್ರಾಹ್ಮಣ ಮಂಡಳಿಯಲ್ಲಿ ಸಭೆ ಕರೆದಿತ್ತು. ಆಗ ಹಲವರು ಸಭೆಗೆ ತೆರಳದಂತೆ ಶ್ರೀಗಳ ಪರ ಭಕ್ತರು, ಪೊರಕೆ, ಚಪ್ಪಲಿ ಹಿಡಿದು ದಾರಿಗೆ ಅಡ್ಡ ನಿಂತರು, ಈ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ಉಂಟಾಯಿತು.

ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ತರಲು 50ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.