ಭರವಸೆ ನೀಡಿದ ಸರ್ಕಾರ: ಪ್ರತಿಭಟನೆ ಹಿಂಪಡೆದ ಟ್ಯಾಂಕರ್ ಚಾಲಕರು
ಪೆಟ್ರೋಲ್, ಡೀಸೆಲ್ ಹಾಗೂ ಅನಿಲ ದರ ಬೆಲೆ ಏರಿಕೆ ಮಾಡಿದ್ದ ಕೇಂದ್ರ ಸರ್ಕಾರದ ನಿರ್ಧಾರ ವಿರೋಧಿಸಿ ನೀಡಿದ್ದ ಪ್ರತಿಭಟನೆಯನ್ನು ಪೆಟ್ರೋಲ್ ಟ್ಯಾಂಕರ್ ಚಾಲಕರು ಭಾನುವಾರ ಹಿಂಪಡೆದಿದ್ದಾರೆ...

ಬೆಂಗಳೂರು: ಪೆಟ್ರೋಲ್, ಡೀಸೆಲ್ ಹಾಗೂ ಅನಿಲ ದರ ಬೆಲೆ ಏರಿಕೆ ಮಾಡಿದ್ದ ಕೇಂದ್ರ ಸರ್ಕಾರದ ನಿರ್ಧಾರ ವಿರೋಧಿಸಿ ನೀಡಿದ್ದ ಪ್ರತಿಭಟನೆಯನ್ನು ಪೆಟ್ರೋಲ್ ಟ್ಯಾಂಕರ್ ಚಾಲಕರು ಭಾನುವಾರ ಹಿಂಪಡೆದಿದ್ದಾರೆ.
ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ಬೃಹತ್ ಪ್ರತಿಭಟನೆ ನಡೆಸಲು ತೈಲ ಟ್ಯಾಂಕರ್ ಗಳ ಚಾಲಕರು, ಕ್ಲೀನರ್ ಗಳು ಕರೆ ನೀಡಿದ್ದರು. ಈಗಾಗಲೇ ಸರ್ಕಾರಿ ನೌಕರರ ಪ್ರತಿಭಟನೆ, ಪೊಲೀಸರ ಪ್ರತಿಭಟನೆಯಿಂದಾಗಿ ಸಾಕಷ್ಟು ಬೇಸತ್ತಿದ್ದ ಜನತೆಗೆ ಪೆಟ್ರೋಲ್ ಮುಷ್ಕರ ಸಾಕಷ್ಟು ಆತಂಕವನ್ನು ಸೃಷ್ಟಿ ಮಾಡಿತ್ತು.
ಹೀಗಾಗಿ ಟ್ಯಾಂಕರ್ ಚಾಲಕರು ನೀಡಿದ್ದ ಪ್ರತಿಭಟನೆ ಕರೆಯನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಸರ್ಕಾರ ತೈಲ ಟ್ಯಾಂಕರ್ ಗಳ ಚಾಲಕರು, ಕ್ಲೀನರ್ ಹಾಗೂ ಇನ್ನಿತರೆ ನೌಕರರನ್ನು ಕರೆದು ಸಭೆ ನಡೆಸಿದೆ.
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಅವರ ನೇತೃತ್ವದಲ್ಲಿ ನಿನ್ನೆ ಸಭೆ ನಡೆದಿದ್ದು, ಸಭೆಯಲ್ಲಿ ತೈಲ ಟ್ಯಾಂಕರ್ ಗಳ ಚಾಲಕರು, ಕ್ಲೀನರ್ ಭಾಗಿಯಾಗಿದ್ದಾರೆ. ಸಭೆಯಲ್ಲಿ ವೇತನ, ಪಿಎಫ್, ವಿಮಾ ಸೌಲಭ್ಯ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವುದಾಗಿ ಗುಪ್ತ ಅವರು ನೌಕರರಿಗೆ ಭರವಸೆ ನೀಡಿದ್ದಾರೆ.
ವೇತನವೇ ನೌಕರರಿಗೆ ದೊಡ್ಡ ಸಮಸ್ಯೆಯಾಗಿದೆ. ಹೀಗಾಗಿ ನೌಕರರಿಗೆ ಕನಿಷ್ಠ ವೇತನ ನೀಡಲು ನಿರ್ಧರಿಸಲಾಗಿದೆ. ನೌಕರರ ಸಮಸ್ಯೆಗಳನ್ನು ಈಡೇರಿಸುವುದು ಕಂಪನಿಗಳ ಕರ್ತವ್ಯವಾಗಿದ್ದು, ಕಂಪನಿಗಳು ಹಾಗೂ ಚಾಲಕರೊಂದಿಗೆ ಜೂನ್.20 ರಂದು ಸಭೆ ನಡೆಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಕೆಲವು ಬೇಡಿಕೆಗಳನ್ನು ಸರ್ಕಾರವೇ ಈಡೇರಿಸಲು ತೀರ್ಮಾನಿಸಿದೆ. ಇನ್ನು ಕೆಲವು ಬೇಡಿಕೆಗಳ ಕುರಿತಂತೆ ಮುಂದಿನ ಸಭೆಯಲ್ಲಿ ಮಾತುಕತೆ ನಡೆಸಲಾಗುತ್ತದೆ. ಸರ್ಕಾರ ನೀಡಿರುವ ಭರವಸೆ ಹಿನ್ನೆಲೆಯಲ್ಲಿ ಈಗಾಗಲೇ ನೀಡಲಾಗಿರುವ ಪ್ರತಿಭಟನೆ ಕರೆಯನ್ನು ಹಿಂಪಡೆಯುತ್ತಿದ್ದೇವೆ ಎಂದು ಬೆಂಗಳೂರು ಪೆಟ್ರೋಲಿಯಂ ಡೀಲರ್ಸ್ ಸಂಸ್ಥೆಯ ಅಧ್ಯಕ್ಷ ಬಿ.ಆರ್. ರವೀಂದ್ರನಾಥ್ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


