ಗುಂಡು ಹಾರಿಸಿಕೊಂಡು ಸಿಆರ್ ಪಿಎಫ್ ಪೇದೆ ಆತ್ಮಹತ್ಯೆ
ಛತ್ತೀಸ್ಗಢದ ನಕ್ಸಲ್ ಪೀಡಿತ ಪ್ರದೇಶ ದಂತೇವಾಡದಲ್ಲಿ ಹುಬ್ಬಳ್ಳಿ ಮೂಲದ ಸಿಆರ್ ಪಿಎಫ್ ಪೇದೆಯೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಹುಬ್ಬಳ್ಳಿ: ಛತ್ತೀಸ್ಗಢದ ನಕ್ಸಲ್ ಪೀಡಿತ ಪ್ರದೇಶ ದಂತೇವಾಡದಲ್ಲಿ ಹುಬ್ಬಳ್ಳಿ ಮೂಲದ ಸಿಆರ್ ಪಿಎಫ್ ಪೇದೆಯೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ.
ಸತೀಶ್ ಯಂಕಪ್ಪ ಸಯನ್ನವಾರ್ (31) ಆತ್ಮಹತ್ಯೆ ಮಾಡಿಕೊಂಡ ಸಿಆರ್ ಪಿಎಫ್ ಪೇದೆ. ಅರನ್ಪುರ ಗ್ರಾಮದಲ್ಲಿದ್ದ ಕ್ಯಾಂಪೊದರಲ್ಲಿ ನಿನ್ನೆ ಬೆಳಿಗ್ಗೆ 10 ಗಂಟೆ ಸುಮಾರಿಗೆ ಬಂದಿರುವ ಸತೀಶ್ ಅವರು ಇದ್ದಕ್ಕಿದ್ದಂತೆ ಇನ್ಸಾಸ್ ರೈಫಲ್ ತೆಗೆದುಕೊಂಡು ಗುಂಡು ಹಾರಿಸಿಕೊಂಡಿದ್ದಾರೆ. ಕೂಡಲೇ ಅವರನ್ನು ಸಹೋದ್ಯೋಗಿಗಳು ಆಸ್ಪತ್ರೆಗೆ ದಾಖಲಿಸಿದ್ದಾರಾದರೂ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.
ಇನ್ನು ಸತೀಶ್ ಅವರ ಆತ್ಮಹತ್ಯೆ ಪ್ರಕರಣ ಕುರಿತಂತೆ ಈಗಾಗಲೇ ನ್ಯಾಯಾಲಯ ತನಿಖೆಗೆ ಆದೇಶಿಸಿದ್ದು, ತನಿಖೆ ನಂತರವಷ್ಟೇ ಆತ್ಮಹತ್ಯೆಗೆ ಪ್ರಮುಖ ಕಾರಣವೇನು ಎಂಬುದು ಹೊರಬರಬೇಕಿದೆ.
ಸತೀಶ್ ಕಳೆದ 11 ವರ್ಷಗಳಿಂದಲೂ 231 ಬೆಟಾಲಿಯನ್ ಸಿಆರ್ ಪಿಎಫ್ ನಲ್ಲಿ ಸೇವೆ ಸಲ್ಲಿಸಿದ್ದು, ಮೂಲತಃ ಹುಬ್ಬಳ್ಳಿಯ ಅಮರ್ಗೋಲ್ ಗ್ರಾಮದವರಾಗಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


