ಸಿಡಿ ಬಿಡುಗಡೆ ಮಾಡ್ತೀನಿ ಎಂದಿದ್ದ ಅನುಪಮಾ ಶೆಣೈ ಅವರಿಗೆ ಕೊಲೆ ಬೆದರಿಕೆ?
ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಕಾರ್ಮಿಕ ಸಚಿವ ಪಿಟಿ ಪರಮೇಶ್ವರ್ ವಿರುದ್ಧ ಸಮರ ಸಾರಿರುವ ಪೊಲೀಸ್ ಅಧಿಕಾರಿ ಅನುಪಮಾ ಶೆಣೈ ಮತ್ತೊಮ್ಮೆ ಫೇಸ್ ಬುಕ್ ನಲ್ಲಿ ಪರಮೇಶ್ವರ್ ನಾಯ್ಕ್ ವಿರುದ್ಧ ಸಿಡಿದ್ದಿದಾರೆ.

ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಕಾರ್ಮಿಕ ಸಚಿವ ಪಿಟಿ ಪರಮೇಶ್ವರ್ ನಾಯ್ಕ್ ವಿರುದ್ಧ ಸಮರ ಸಾರಿರುವ ಪೊಲೀಸ್ ಅಧಿಕಾರಿ ಅನುಪಮಾ ಶೆಣೈ ಮತ್ತೊಮ್ಮೆ ಫೇಸ್ ಬುಕ್ ನಲ್ಲಿ ಪರಮೇಶ್ವರ್ ನಾಯ್ಕ್ ವಿರುದ್ಧ ಸಿಡಿದ್ದಿದಾರೆ.
'#ಪರಮೇಶಿ ಪ್ರೇಮಪ್ರಸಂಗ ಭಾಗ-1#...ಸಿಡಿ ಬೇಕೋ, ಆಡಿಯೋ ಬೇಕೋ' ಎಂದು ಪ್ರಶ್ನಿಸಿದ್ದ ಅನುಪಮಾ ಶೆಣೈ ಈಗ ಸಿಡಿ ಬಿಡುಗಡೆ ಮಾಡುತ್ತೇನೆ ಎಂದಿದ್ದಕ್ಕೆ ಕೊಲೆ ಬೆದರಿಕೆ ಬಂದಿದೆ ಎಂದು ಫೇಸ್ ಬುಕ್ ನಲ್ಲಿ ಬರೆದಿದ್ದು, ಕೊಲೆ ಬೆದರಿಕೆಗೂ ಹೆದರುವುದಿಲ್ಲ, ಕೊಲೆ ಮಾಡಿದರೂ ದೆವ್ವವಾಗಿ ಬಂದು ಕಾಡ್ತೀನಿ ಎಂದು ಪೋಸ್ಟ್ ಅಪ್ ಡೇಟ್ ಮಾಡಿದ್ದಾರೆ.
ಅಕ್ರಮ ಮದ್ಯ ಮಾರಾಟಗಾರರ ಪರವಾಗಿ ಲಾಬಿ ನಡೆಸುತ್ತಿರುವುದರ ವಿಚಾರವಾಗಿ ಅಸಮಾಧಾನಗೊಂದಿದ್ದ ಅನುಪಮಾ ಶೆಣೈ ಕೂಡ್ಲಗಿ ಕೂಡ್ಲಿಗಿ ಡಿವೈಎಸ್ಪಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ರಾಜೀನಾಮೆ ನೀಡಿದ ಬಳಿಕ ಸರಣಿ ಫೇಸ್ ಬುಕ್ ಪೋಸ್ಟ್ ಗಳ ಮೂಲಕ ರಾಜ್ಯ ಸರ್ಕಾರ ಹಾಗೂ ಕೂಡ್ಲಗಿ ಶಾಸಕ, ಸಚಿವ ಪರಮೇಶ್ವರ್ ನಾಯ್ಕ್ ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಫೇಸ್ ಬುಕ್ ಸಮರದ ಮುಂದುವರೆದ ಭಾಗವಾಗಿ '#ಪರಮೇಶಿ ಪ್ರೇಮಪ್ರಸಂಗ ಭಾಗ-1#...ಸಿಡಿ ಬೇಕೋ, ಆಡಿಯೋ ಬೇಕೋ' ಎಂಬ ಹ್ಯಾಶ್ ಟ್ಯಾಗ್ ಬಳಸಿ ಪರಮೇಶ್ವರ್ ನಾಯ್ಕ್ ಅವರಿಗೆ ಸಂಬಂಧಿಸಿದ ಸಿಡಿಯನ್ನು ಬಿಡುಗಡೆ ಮಾಡುವುದಾಗಿ ಅನುಪಮಾ ಶೆಣೈ ಫೇಸ್ ಬುಕ್ ನಲ್ಲಿ ಹೇಳಿದ್ದರು. ಈ ಪೋಸ್ಟ್ ಅಪ್ ಡೇಟ್ ಆದ ಕೆಲವು ಗಂಟೆಗಳ ನಂತರ ಇದಕ್ಕೆ ಸಂಬಂಧಿಸಿದಂತೆ ಮತ್ತೊಂದು ಸ್ಟೇಟಸ್ ಅಪ್ ಡೇಟ್ ಮಾಡಿರುವ ಅನುಪಮಾ ಶೆಣೈ, ಸಿಡಿ ಬಿಡುಗಡೆ ಮಾಡುತ್ತೀನಿ ಎಂದಿದ್ದರೆ ಕೊಲೆ ಬೆದರಿಕೆ ಹಾಕ್ತೀರಾ? ದೆವ್ವವಾಗಿ ಬಂದು ಕಾಡ್ತೀನಿ ಎಂದು ಎಚ್ಚರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


