ಪಕ್ಷೇತರ ಶಾಸಕರಿಗೆ ಅನುದಾನದ ಆಮಿಷ ನೀಡಿಲ್ಲ: ಸಿಎಂ ಸ್ಪಷ್ಟನೆ
ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಪರ ಮತ ಚಲಾಯಿಸುವಂತೆ ಪಕ್ಷೇತರ ಶಾಸಕರಿಗೆ ಯಾವುದೇ ಅನುದಾನದ ಆಮಿಷವನ್ನು ನೀಡಿಲ್ಲ ಎಂದು ರಾಜ್ಯಸಭಾ ಚುನಾವಣಾಧಿಕಾರಿ...

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಪರ ಮತ ಚಲಾಯಿಸುವಂತೆ ಪಕ್ಷೇತರ ಶಾಸಕರಿಗೆ ಯಾವುದೇ ಅನುದಾನದ ಆಮಿಷವನ್ನು ನೀಡಿಲ್ಲ ಎಂದು ರಾಜ್ಯಸಭಾ ಚುನಾವಣಾಧಿಕಾರಿ ಎಸ್.ಮೂರ್ತಿ ಬರೆದಿದ್ದ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ.
ಈ ಹಿಂದೆ ಖಾಸಗಿ ಮಾಧ್ಯಮವೊಂದು ನಡೆಸಿದ್ದ ಕುಟುಕು ಕಾರ್ಯಾಚರಣೆಯಲ್ಲಿ ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಪರ ಮತ ಚಲಾಯಿಸಿದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರು.100 ಕೋಟಿ ಅನುದಾನ ನೀಡುತ್ತಾರೆಂದು ತಿಳಿಸಿದ್ದಾರೆಂದು ಶಾಸಕರೊಬ್ಬರು ಹೇಳಿಕೊಂಡಿದ್ದರು. ಹೀಗಾಗಿ ಪ್ರಕರಣ ಕುರಿತಂತೆ ರಾಜ್ಯಸಭಾ ಚುನಾವಣಾಧಿಕಾರಿ ಎಸ್. ಮೂರ್ತಿಯವರು ಸ್ಪಷ್ಟನೆ ನೀಡುವಂತೆ ಸಿದ್ದರಾಮಯ್ಯ ಅವರಿಗೆ ಪತ್ರವನ್ನು ಬರೆದಿದ್ದರು.
ಇದರಂತೆ ನಿನ್ನೆ ಸಿಎಂ ಕಚೇರಿಯಿಂದ ಚುನಾವಣಾಧಿಕಾರಿಗೆ ಪತ್ರೆ ಬರೆದಿರುವ ಸಿದ್ದರಾಮಯ್ಯ ಅವರು, ಎಸ್. ಮೂರ್ತಿಯವರು ಕೇಳಿದ್ದ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ.
ಇನ್ನು ಪತ್ರದ ಬರೆದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಪ್ರಶ್ನೆ ಏಳುವುದು ನಾನು ಈ ರೀತಿಯ ಆಮಿಷವನ್ನು ಎಲ್ಲಿ, ಯಾವಾಗ ನೀಡಿದ್ದೇನೆಂಬುದ ಬಗ್ಗೆ. ನಾನು ಯಾರಿಗೂ ಅನುದಾನದ ಆಮಿಷವನ್ನು ನೀಡಿಲ್ಲ ಎಂದು ಹೇಳಿದ್ದಾರೆ.
ಪಕ್ಷೇತರ ಶಾಸಕರು ಬರೆದಿರುವ ಪತ್ರಗಳು ಹಾಗೂ ಮನವಿಗಳನ್ನು ಸಾಮಾನ್ಯವಾಗಿ ನಡೆಸುವ ಪ್ರಕ್ರಿಯೆಯಂತೆಯೇ ನಡೆಸಲಾಗುತ್ತಿದೆ. ಯಾವುದೇ ಪಕ್ಷೇತರ ಶಾಸಕರ ಕ್ಷೇತ್ರಗಳ ಅಭಿವೃದ್ಧಿ ಕುರಿತ ಕಡತಗಳನ್ನು ತರಾತುರಿಯಲ್ಲಿ ಪರಿಶೀಲಿಸಲಾಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಧಾನ ಕಾರ್ಯದರ್ಶಿ ಎಲ್.ಕೆ. ಅಥೀಕ್ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


