ಹತ್ತು ವಿದ್ಯಾರ್ಥಿಗಳಿರುವ ಸರ್ಕಾರಿ ಶಾಲೆಗೆ ಬೀಗ ಜಡಿಯುವ ಭೀತಿ!
10 ಮಕ್ಕಳಿಗಿಂತ ಕಡಿಮೆ ದಾಖಲಾತಿಯಿರುವ ಸರ್ಕಾರಿ ಶಾಲೆಗಳನ್ನು ಮುಚ್ಚುವಂತೆ ಇತ್ತೀಚೆಗಷ್ಟೇ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ, ಈ ಆದೇಶ ಇದೀಗ...

ಕಲಬುರ್ಗಿ: 10 ಮಕ್ಕಳಿಗಿಂತ ಕಡಿಮೆ ದಾಖಲಾತಿಯಿರುವ ಸರ್ಕಾರಿ ಶಾಲೆಗಳನ್ನು ಮುಚ್ಚುವಂತೆ ಇತ್ತೀಚೆಗಷ್ಟೇ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ, ಈ ಆದೇಶ ಇದೀಗ ಕಲಬುರ್ಗಿಯ 10 ವಿದ್ಯಾರ್ಥಿಗಳ ಭವಿಷ್ಯಕ್ಕೆ ಕುತ್ತು ತಂದಿದೆ.
ಕಲಬುರ್ಗಿಯಲ್ಲಿರುವ ಬಹುತೇಕ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿಗಳ ಕೊರತೆ ಎದ್ದು ಕಾಣುತ್ತಿದ್ದು, ಇಲ್ಲಿನ 50 ಕ್ಕೂ ಹೆಚ್ಚು ಶಾಲೆಗಳಲ್ಲಿ 10 ವಿದ್ಯಾರ್ಥಿಗಳಿಗಿಂತ ಕಡಿಮೆ ದಾಖಲಾತಿಯಿದೆ.
ಶಾಲೆಯಲ್ಲಿ 1ನೇ ತರಗತಿಯಲ್ಲಿ 2 ವಿದ್ಯಾರ್ಥಿಗಳು, 2ನೇ ತರಗತಿಯಲ್ಲಿ 5 ವಿದ್ಯಾರ್ಥಿಗಳು, 4ನೇ ತರಗತಿಯಲ್ಲಿ 2 ಹಾಗೂ 5ನೇ ತರಗತಿಯಲ್ಲಿ ಕೇವಲ 1 ವಿದ್ಯಾರ್ಥಿಗಳಿದ್ದಾರೆ. 3ನೇ ತರಗತಿಯಲ್ಲಿ ಯಾವುದೇ ವಿದ್ಯಾರ್ಥಿಗಳು ದಾಖಲಾಗಿಲ್ಲ. ಇದರಂತೆ ಶಾಲೆಯಲ್ಲಿ 10 ವಿದ್ಯಾರ್ಥಿಗಳಿದ್ದು, 10 ವಿದ್ಯಾರ್ಥಿಗಳ ಪೈಕಿ 6 ವಿದ್ಯಾರ್ಥಿಗಳು ಬಾಲಕರಾಗಿದ್ದಾರೆ. ಮಕ್ಕಳ ಪೋಷಕರು ಕೂಲಿ ಮಾಡಿಕೊಂಡು ಜೀವನ ನಡೆಸುತ್ತಿದ್ದು, ಸೋಮಶೇಖರ್ ನಗರದಲ್ಲಿ ಜೀವನ ನಡೆಸುತ್ತಿದ್ದಾರೆ. ಮಕ್ಕಳು ಪ್ರತಿ ದಿನ 2 ಕಿ.ಮೀನಷ್ಟು ದೂರದಿಂದ ಶಾಲೆಗೆ ಬರುತ್ತಿದ್ದಾರೆಂದು ಸರ್ಕಾರಿ ಶಾಲೆಯ ಮುಖ್ಯಸ್ಥೆ ಶಶಿಕಲಾ ಹಮ್ಬಾಡಿ ಅವರು ಹೇಳಿದ್ದಾರೆ.
ಸೋಮಶೇಖರ್ ನಗರ ಜನತೆಗೆ ಸಹಾಯ ಮಾಡುವುದಕ್ಕಾಗಿ ಸರ್ಕಾರಿ ಶಾಲೆಗಳನ್ನು ತೆರೆಯಲಾಗಿತ್ತು. ಶಾಲೆಗೆ ಬರುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದ್ದು, ಇನ್ನು ಶಾಲೆಯನ್ನು ವಿಲೀನಗೊಳಿಸಿದರೆ, ವಿದ್ಯಾರ್ಥಿಗಳು ಶಾಲೆ ಬಿಟ್ಟುಹೋಗುವ ಸಂಭವವಿದೆ ಎಂದು ಹೇಳಿದ್ದಾರೆ.
ಇನ್ನು ವಿದ್ಯಾರ್ಥಿಯೊಬ್ಬರ ಪೋಷಕರಾದ ಹನುಮಂತ ರಾಜ್ವಾಡೆ ಮಾತನಾಡಿ, ಶಾಲೆ ವಿಲೀನಗೊಂಡರೆ ಮಕ್ಕಳನ್ನು ಶಾಲೆಗೆ ಕಳುಹಿಸುವುದೋ ಅಥವಾ ಬೇಡವೋ ಎಂಬುದರ ಕುರಿತಂತೆ ಇನ್ನಿತರೆ ಪೋಷಕರೊಂದಿಗೆ ಮಾತುಕತೆ ನಡೆಸಲಾಗುತ್ತದೆ. ಶಾಲೆಗಾಗಿಯೇ ಪ್ರತೀದಿನ 8 ಕಿ.ಮೀ ನಷ್ಟು ದೂರ ಹೋಗಿ ಬರಲು ಮಕ್ಕಳಿಗೆ ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ.
2ನೇ ತರಗತಿ ಓದುತ್ತಿರುವ ವಿದ್ಯಾರ್ಥಿ ಲಕ್ಷ್ಮೀ ಮಾತನಾಡಿ, ನನ್ನ ಪೋಷಕರು ಒಪ್ಪಿಗೆ ಸೂಚಿಸಿದರೆ ಎಷ್ಟು ದೂರವಾದರೂ ನಾನು ಶಾಲೆಗೆ ಹೋಗುತ್ತೇನೆಂದು ಹೇಳಿದ್ದಾಳೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


