ಮಂಗಳೂರು ಹೊರವಲಯದಲ್ಲಿ ಭೀಕರ ಸರಣಿ ಅಪಘಾತ, 5 ಸಾವು
ಮಂಗಳೂರಿನ ಹೊರವಲಯದಲ್ಲಿ ಶುಕ್ರವಾರ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಮೂವರು...

Published On :
ಮಂಗಳೂರು: ಮಂಗಳೂರಿನ ಹೊರವಲಯದಲ್ಲಿ ಶುಕ್ರವಾರ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹೊರವಲಯದ ವಳಚ್ಚಿಲ್ ಎಂಬಲ್ಲಿನ ಅರ್ಕುಳ ಬಳಿ ಬಿ.ಸಿ.ರೋಡ್ ಮತ್ತು ಮಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಟೈನರ್‌ವೊಂದು ಎದುರುಗಡೆಯಿಂದ ಬರುತ್ತಿದ್ದ ಮಾರುತಿ ಕಾರಿಗೆ ಹಾಗೂ ಆಟೋಗೆ ಡಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ರಿಕ್ಷಾ ಕಂಟೈನರ್ ಅಡಿಯಲ್ಲಿ ಸಿಲುಕಿ ನಜ್ಜು ಗುಜ್ಜಾಗಿದೆ.ಈ ನತದೃಷ್ಟ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಬಿ.ಸಿ.ರೋಡ್ ನಂದಾವರದ ಆರು ಮಂದಿಯ ಪೈಕಿ ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರಿನಲ್ಲಿದ್ದ ಇಬ್ಬರು ಸೇರಿದಂತೆ ಗಾಯಗೊಂಡ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


