ರಾಜ್ಯಸಭಾ ಚುನಾವಣೆ ಫಲಿತಾಂಶ: ಕಾಂಗ್ರೆಸ್ ನ 3 , ಬಿಜೆಪಿಯ ಓರ್ವ ಅಭ್ಯರ್ಥಿ ಗೆಲುವು, ಜೆಡಿಎಸ್ ಗೆ ಮುಖಭಂಗ
ಜೂ.11 ರಂದು ಕರ್ನಾಟಕದ 5 ರಾಜ್ಯಸಭಾ ಸ್ಥಾನಗಳಿಗೆ ನಡೆದ ಚುನಾವಣೆ ಮತ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಫಲಿತಾಂಶ ಪ್ರಕಟಗೊಂಡಿದೆ.

ಬೆಂಗಳೂರು: ಜೂ.11 ರಂದು ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ನಡೆದ ಚುನಾವಣೆ ಮತ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಫಲಿತಾಂಶ ಪ್ರಕಟಗೊಂಡಿದೆ.
ಕಾಂಗ್ರೆಸ್ ನ ಮೂರನೇ ಅಭ್ಯರ್ಥಿಯಾಗಿದ್ದ ನಿವೃತ್ತ ಪೊಲೀಸ್ ಅಧಿಕಾರಿ ಕೆಸಿ ರಾಮಮೂರ್ತಿ
ಜೆಡಿಎಸ್ ನ 8 ಶಾಸಕರ ಅಡ್ಡಮತದಾನದ ಪರಿಣಾಮ 52 ಮತಗಳನ್ನು ಪಡೆಯುವ ಮೂಲಕ ಅತಿ ಹೆಚ್ಚು ಮತಗಳೊಂದಿಗೆ ರಾಜ್ಯಸಭೆಗೆ ಆಯ್ಕೆಗೊಂಡಿದ್ದಾರೆ. ಇನ್ನು ಉಳಿದಂತೆ ಕಾಂಗ್ರೆಸ್ ಅಭ್ಯರ್ಥಿಗಳಾಗಿದ್ದ ಆಸ್ಕರ್ ಫರ್ನಾಂಡೀಸ್ ಹಾಗೂ ಜೈರಾಮ್ ರಮೇಶ್ ತಲಾ 46 ಮತಗಳ ಮೂಲಕ ರಾಜ್ಯಸಭೆಗೆ ಆಯ್ಕೆಗೊಂಡಿದ್ದಾರೆ.
ಬಿಜೆಪಿಯಿಂದ ಸ್ಪರ್ಧಿಸಿದ್ದ ನಿರ್ಮಲಾ ಸೀತಾರಾಮನ್ ಗೆ 47 ಮತಗಳು ದೊರೆತಿದ್ದು ರಾಜ್ಯಸಭೆಗೆ ಕರ್ನಾಟಕದಿಂದ ಆಯ್ಕೆಯಾಗಿದ್ದಾರೆ. ಇನ್ನು ಜೆಡಿಎಸ್ ನಿಂದ ಸ್ಪರ್ಧಿಸಿದ್ದ ಬಿಎಂ ಫಾರೂಕ್ ಕೇವಲ 33 ಮತಗಳನ್ನು ಪಡೆದಿದ್ದು ಜೆಡಿಎಸ್ ಗೆ ತೀವ್ರ ಮುಖಭಂಗ ಉಂಟಾಗಿದೆ. ಜೆಡಿಎಸ್ ನ 8 ಶಾಸಕರು ಕಾಂಗ್ರೆಸ್ ನ ಮೂರನೇ ಅಭ್ಯರ್ಥಿ ಕೆಸಿ ರಾಮಮೂರ್ತಿಗೆ ಮತಚಲಾಯಿಸಿದ್ದು, ಕೆಸಿ ರಾಮಮೂರ್ತಿ ಅತಿ ಹೆಚ್ಚು ಮತಗಳೊಂದಿಗೆ ರಾಜ್ಯಸಭೆಗೆ ಆಯ್ಕೆಯಾಗಲು ನೆರವಾಗಿದ್ದು ತನ್ನ ಮೂರನೇ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಕಾಂಗ್ರೆಸ್ ಯಶಸ್ವಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


