ಅನುಪಮಾ ಶೆಣೈ ವಿರುದ್ಧ ಪತ್ರಕರ್ತರ ಆಕ್ರೋಶ
ತಮ್ಮ ರಾಜಿನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿ ಬಿತ್ತರಿಸಿದ ಮಾಧ್ಯಮಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸ್ಟೇಟಸ್ ಹಾಕಿರುವ ಮಾಜಿ ಡಿವೈಎಸ್ ಪಿ ಅನುಪಮಾ ಶಣೈ ಎಂಬ ಫೇಸ್ ಬುಕ್ ಖಾತೆ ನಿರ್ಹಹಣೆದಾರರ ವಿರುದ್ಧ ದೂರು ದಾಖಲಾಗಿದೆ...

ಬಳ್ಳಾರಿ: ತಮ್ಮ ರಾಜಿನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿ ಬಿತ್ತರಿಸಿದ ಮಾಧ್ಯಮಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸ್ಟೇಟಸ್ ಹಾಕಿರುವ ಮಾಜಿ ಡಿವೈಎಸ್ ಪಿ ಅನುಪಮಾ ಶಣೈ ಎಂಬ ಫೇಸ್ ಬುಕ್ ಖಾತೆ ನಿರ್ಹಹಣೆದಾರರ ವಿರುದ್ಧ ದೂರು ದಾಖಲಾಗಿದೆ.
ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಎಂಬ ಹೆಸರಿನ ಫೇಸ್ ಬುಕ್ ಖಾತೆ ನಿರ್ವಹಣೆ ಮಾಡುತ್ತಿರುವವರ ವಿರುದ್ಧ ಬಳ್ಳಾರಿ ಮೀಡಿಯಾ ಕ್ಲಬ್ ವತಿಯಿಂದ ದೂರು ನೀಡಲಾಗಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಬಳ್ಳಾರಿ ಎಸ್‌ಪಿ ವಿಜಯ ಡಂಬಳಗೆ ಅವರಿಗೆ ಮನವಿ ಮಾಡಲಾಗಿದೆ.
ಮನವಿಯಲ್ಲಿ "ಫೇಸ್‌ಬುಕ್‌ನಲ್ಲಿ ಮಾಧ್ಯಮದವರ ವಿರುದ್ಧ ಅವಹೇಳನಕಾರಿಯಾಗಿ ಸ್ಟೇಟಸ್ ಹಾಕಿರುವುದು ಖಂಡನೀಯ. ದಿನನಿತ್ಯ ನಡೆಯುವ ಘಟನೆ, ಬೆಳವಣಿಗೆಗಳ ಬಗ್ಗೆ ವರದಿ ಮಾಡುವುದೇ ಮಾಧ್ಯಮದವರ ವೃತ್ತಿ. ಅಂತಹ ಮಾಧ್ಯಮದವರ ವಿರುದ್ಧ ಫೇಸ್‌ಬುಕ್‌ನಲ್ಲಿ ‘ಬೈಟ್ಸ್ ಕೊಡಿ, ಬೈಟ್ಸ್ ಕೊಡಿ ಅಂತ ಹದ್ದುಗಳ ಥರ ಕಿತ್ತಾಡ್ಕೊಂಡು ಬರೀ ಅಸ್ಥಿಪಂಜರ ಉಳಿದಿದೆ. ಅಸ್ಥಿಪಂಜರ ಅಶ್ಲೀಲವಲ್ಲ. ಬೋ..ಮಕ್ಳ ಇನ್ನೂ ಸಿಡಿಬೇಕಾ’ ಎಂದು ಪೋಸ್ಟ್ ಮಾಡುವ ಮೂಲಕ ಅವಮಾನಗೊಳಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


