ದಕ್ಷಿಣ ಪದವೀಧರರ ಕ್ಷೇತ್ರದ ಮತ ಎಣಿಕೆಯಲ್ಲಿ 9 ಮತಗಳು ನಾಪತ್ತೆ!
ದಕ್ಷಿಣ ಪದವೀಧರರ ಕ್ಷೇತ್ರದ ವಿಧಾನಪರಿಷತ್ತಿನ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, 9 ಮತಗಳು ನಾಪತ್ತೆಯಾಗಿವೆ. ..

ಮೈಸೂರು: ದಕ್ಷಿಣ ಪದವೀಧರರ ಕ್ಷೇತ್ರದ ವಿಧಾನಪರಿಷತ್ತಿನ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, 9 ಮತಗಳು ನಾಪತ್ತೆಯಾಗಿವೆ. ಊಟಿ ರಸ್ತೆಯ ಜೆಎಸ್‌ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ಮತ ಎಣಿಕೆ ನಡೆಯುತ್ತಿದ್ದು ಬೆಳಿಗ್ಗೆ 8 ಗಂಟೆಗೆ ಎಣಿಕೆ ಪ್ರಕ್ರಿಯೆ ಆರಂಭವಾಯಿತು.
ಜೂನ್ 9ರಂದು ನಡೆದ ಮತದಾನದಲ್ಲಿ ಮೈಸೂರಿನ ರಾಮಕೃಷ್ಣ ವಿದ್ಯಾಕೇಂದ್ರದ ಮತಗಟ್ಟೆಯಲ್ಲಿ ಒಟ್ಟು 559 ಮತಗಳು ಚಲಾವಣೆಗೊಂಡಿದ್ದವು. ಆದರೆ, ಎಣಿಕೆ ಸಂದರ್ಭದಲ್ಲಿ ಮತ ಪೆಟ್ಟಿಗೆಯಲ್ಲಿ 550 ಮತಗಳು ಸಿಕ್ಕಿದ್ದು, ಉಳಿದ 9 ಮತಗಳ ವ್ಯತ್ಯಾಸ ಕಂಡುಬಂದಿದೆ. ಚುನಾವಣಾಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು ಮತ ಎಣಿಕೆ ಕೇಂದ್ರದಲ್ಲಿ ಭಾರಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಜೂನ್ 9ರಂದು ದಕ್ಷಿಣ ಪದವೀಧರ, ಪಶ್ಚಿಮ ಶಿಕ್ಷಕ, ವಾಯುವ್ಯ ಪದವೀಧರ, ವಾಯುವ್ಯ ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆ ನಡೆದಿತ್ತು
ಬಸವರಾಜ ಹೊರಟ್ಟಿ, ಎಂ.ಪಿ.ನಾಡಗೌಡ, ಮಹಾಂತೇಶ ಕೌಜಲಗಿ, ಅರುಣ ಶಹಾಪುರ, ಕೆ.ಎಸ್.ಭಗವಾನ್, ವಾಟಾಳ್ ನಾಗರಾಜ್ ಸೇರಿದಂತೆ 4 ಕ್ಷೇತ್ರಗಳ ಚುನಾವಣೆಯಲ್ಲಿ 59 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


