ಹೆಲ್ಮೆಟ್ ರಹಿತ ಬೈಕ್ ಪ್ರಯಾಣ 2ನೇ ದೊಡ್ಡ ನಿಯಮ ಉಲ್ಲಂಘನೆ
ನಗರದಲ್ಲಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಒಂದೇ ದಿನದಲ್ಲಿ ಹೆಲ್ಮೆಟ್ ರಹಿತ ಪ್ರಯಾಣ ಮಾಡಿದ ಸುಮಾರು 4,671 ಪ್ರಕರಣಗಳು...

ಬೆಂಗಳೂರು: ನಗರದಲ್ಲಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಒಂದೇ ದಿನದಲ್ಲಿ ಹೆಲ್ಮೆಟ್ ರಹಿತ ಪ್ರಯಾಣ ಮಾಡಿದ ಸುಮಾರು 4,671 ಪ್ರಕರಣಗಳು ದಾಖಲಾಗಿವೆ.
ಜನವರಿ ಮತ್ತು ಏಪ್ರಿಲ್ ತಿಂಗಳಿನಲ್ಲಿ 5.65 ಲಕ್ಷ ದ್ವಿಚಕ್ರ ವಾಹನ ಸವಾರರು ನಿಯಮ ಉಲ್ಲಂಘಟನೆ ಮಾಡಿ ದಂಡ ಕಟ್ಟಿದ್ದಾರೆ. ಈ ಹಿಂದಿಗಿಂತಲೂ ಇತ್ತೀಚಿನ ದಿನಗಳಲ್ಲಿಯೇ ಹೆಚ್ಚಿನ ಸಂಖ್ಯೆಯಲ್ಲಿ ಸಂಚಾರಿ ನಿಯಮಗಳು ಉಲ್ಲಂಘನೆಯಾಗುತ್ತಿದ್ದು, ಅನಧಿಕೃತ ಜಾಗದಲ್ಲಿ ವಾಹನಗಳನ್ನು ಪಾರ್ಕ್ ಮಾಡಿದ ಸುಮಾರು 9.1 ಲಕ್ಷ ಪ್ರಕರಣಗಳು ದಾಖಲಾಗಿವೆ.
ಹೆಲ್ಮೆಟ್ ರಹಿತ ಪ್ರಯಾಣ 6,62 ಲಕ್ಷ, ಶಿಸ್ತು ಪಥ ಉಲ್ಲಂಘನೆ 1.69 ಲಕ್ಷ, ಸಿಗ್ನಲ್ ಜಂಪ್ 1.54 ಲಕ್ಷ ಹಾಗೂ ನೋ ಎಂಟ್ರಿ 1.47 ರಷ್ಟು ಪ್ರಕರಣಗಳು ದಾಖಲಾಗಿವೆ.
ನಗರದಲ್ಲಿ ಹೆಚ್ಚಾಗುತ್ತಿದ್ದ ದ್ವಿಚಕ್ರ ವಾಹನ ಅಪಘಾತ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಸರ್ಕಾರ ಜ.21 ರಂದು ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯ ಎಂಬ ನಿಯಮವನ್ನು ಜಾರಿಗೆ ತಂದಿತ್ತು. ಪ್ರಾರಂಭದಲ್ಲಿ ಈ ನಿಯಮಕ್ಕೆ ಸಾಕಷ್ಟು ಪರ-ವಿರೋಧದ ಮಾತುಗಳು ಕೇಳಿಬಂದಿದ್ದವು. ಆದರೆ, ಸರ್ಕಾರ ದಂಡವೆಂಬ ಅಸ್ತ್ರ ವಿಡಿದಾಗ ಎಲ್ಲರೂ ನಿಯಮವನ್ನು ಒಪ್ಪಿಕೊಳ್ಳುವಂತಾಯಿತು.
ಈ ಬಗ್ಗೆ ಮಾತನಾಡಿರುವ ಸಂಚಾರಿ ಪೊಲೀಸ್ ಆಯುಕ್ತ ಆರ್. ಹಿತೇಂದ್ರ ಅವರು, ಹೊಸ ನಿಯಮಗಳು ಜಾರಿಯಾದಾಗಿನಿಂದಲೂ ನಿಯಮ ಉಲ್ಲಂಘಟನೆ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ದ್ವಿಚಕ್ರ ವಾಹನಗಳಿಂದ ಅಪಘಾತ ಪ್ರಕರಗಳು ಹೆಚ್ಚಾಗುತ್ತಿವೆ. ದ್ವಿಚಕ್ರ ವಾಹನ ಸವಾರರು ಐಎಸ್ಐ ಪ್ರಮಾಣಿತ ಹೆಲ್ಮೆಟ್ ಗಳನ್ನು ಹಾಕಿಕೊಳ್ಳುತ್ತಿಲ್ಲ. ಕಡಿಮೆ ಬೆಲೆಯಲ್ಲಿ ಸಿಗುವ ಕಾರ್ಮಿಕರು ಕೆಲಸದ ಸಮಯದಲ್ಲಿ ಹಾಕಿಕೊಳ್ಳುವ ಕಳಪೆ ಗುಣಮಟ್ಟದ ಹೆಲ್ಮೆಟ್ ಗಳನ್ನು ಹಾಕಿಕೊಳ್ಳುತ್ತಾರೆಂದು ಹೇಳಿದ್ದಾರೆ.
ಮೋಟಾರು ವಾಹನ ಸೆಕ್ಷನ್ 129ರ ಪ್ರಕಾರ ಐಎಸ್ಐ ಧೃಢೀಕೃತ ಹೆಲ್ಮೆಟ್ ಗಳನ್ನು ಹಾಕದ ಸವಾರರಿಗೆ ದಂಡ ಹಾಕಬಹುದು. ಆದರೆ, ಸಂಚಾರಿ ಪೊಲೀಸರು ಈ ಬಗ್ಗೆ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ.
ಎಲ್ಲಿ ಹೋದರೂ ಹೆಲ್ಮೆಟ್ ಹೊತ್ತುಕೊಂಡು ಹೋಗುವುದು ಕಷ್ಟವಾಗಿದೆ. ಕೆಲ ಸಂದರ್ಭದಲ್ಲಿ ಹೆಲ್ಮೆಟ್ ಗಳು ಅದಲು ಬದಲಾಗುವ ಸಾಧ್ಯತೆಗಳಿರುವ ಕಾರಣ ದುಬಾರಿ ಬೆಲೆ ಕೊಟ್ಟು ಐಎಸ್ಐ ಮಾರ್ಕ್ ಇರುವ ಹೆಲ್ಮೆಟ್ ಕೊಂಡುಕೊಳ್ಳಲು ಇಚ್ಛಿಸುವುದಿಲ್ಲ. ಟ್ರಾಪಿಕ್ ಪೋಲೀಸರಿಂದ ತಪ್ಪಿಸಿಕೊಳ್ಳುವ ಸಲುವಾಗಿ ಸ್ಥಳೀಯ ಅಂಗಡಿಗಳಲ್ಲಿ ಕಡಿಮೆ ವೆಚ್ಚದಲ್ಲಿರುವ ಹೆಲ್ಮೆಟ್ ನ್ನು ಕೊಂಡುಕೊಂಡಿದ್ದಾನೆಂದು ಶಿವಾಜಿನಗರದ ನಿವಾರಿ ಕೆ.ಲಕ್ಷ್ಮಿ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


