ಯದುವೀರ್ ಒಡೆಯರ್ ವಿವಾಹಕ್ಕೆ ಸಿದ್ಧತೆ: ಅರಮನೆ ಪ್ರವೇಶಕ್ಕೆ ನಿರ್ಬಂಧ
ಬಹು ಕುತೂಹಲ ಮೂಡಿಸಿರುವ ಮೈಸೂರು ರಾಜಮನೆತನದ ಉತ್ತರಾಧಿಕಾರಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಅದ್ದೂರಿ ವಿವಾಹ ...

ಮೈಸೂರು: ಬಹು ಕುತೂಹಲ ಮೂಡಿಸಿರುವ ಮೈಸೂರು ರಾಜಮನೆತನದ ಉತ್ತರಾಧಿಕಾರಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಅದ್ದೂರಿ ವಿವಾಹ ಮಹೋತ್ಸವಕ್ಕೆ ಅರಮನೆ ಸಜ್ಜಾಗುತ್ತಿದೆ.
ಅರಮನೆಯಲ್ಲಿ ವಿವಾಹ ಸಂಬಂಧ ಕಾರ್ಯಕ್ರಮಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ಜೂನ್ 23 ರಿಂದ 28 ರ ವರೆಗೆ ಮೈಸೂರು ಅರಮನೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗುತ್ತದೆ.
ರಾಜಮಾತೆ ಪ್ರಮೋದಾ ದೇವಿ ಅವರು ಮೈಸೂರು ಜಿಲ್ಲಾಧಿಕಾರಿ ಶಿಖಾ ಅವರಿಗೆ ಪತ್ರ ಬರೆದು ಜೂನ್ 23 ರಿಂದ 28 ವರೆಗೆ ಅರಮನೆಗೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸಲು ಮನವಿ ಮಾಡಿದ್ದಾರೆ.
ರಾಜಸ್ಥಾನದ ದುಂಗರ್ಪುರ್ ರಾಜಮನೆತನದ ರಿಶಿಕಾಕುಮಾರಿ ಮನವಿ ಅವರನ್ನು ಯದುವೀರ್ ಅವರು ಜೂನ್ 27 ರಂದು ವಿವಾಹವಾಗಲಿದ್ದಾರೆ. 28 ರಂದು ಅರಮನೆಯಲ್ಲಿ ಅರತಕ್ಷತೆ ನಡೆಯಲಿದೆ.
ವಿಶ್ವ ವಿಖ್ಯಾತ ಅಂಬಾವಿಲಾಸ ಅರಮನೆ ಕಲ್ಯಾಣ ಮಂಟಪದಲ್ಲಿ ಐದು ದಿನಗಳ ಕಾಲ ವಿವಾಹ ಮಹೋತ್ಸವ ನಡೆಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


