ಯೋಗೇಶಗೌಡ ಕೊಲೆ ಕೇಸ್: ಐವರು ಆರೋಪಿಗಳು 2 ದಿನ ಪೊಲೀಸ್ ವಶಕ್ಕೆ
ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೇಶಗೌಡ ಗೌಡರ್ ಕೊಲೆ ಪ್ರಕರಣಕ್ಕೆಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಐವರು ಆರೋಪಿಗಳನ್ನು...

Published On :
ಧಾರವಾಡ: ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೇಶಗೌಡ ಗೌಡರ್ ಕೊಲೆ ಪ್ರಕರಣಕ್ಕೆಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಐವರು ಆರೋಪಿಗಳನ್ನು ಕೋರ್ಟ್ ಶನಿವಾರ ಎರಡು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿದೆ.
ಯೋಗೇಶಗೌಡ ಕೊಲೆ ಪ್ರಕರಣ ಸಂಬಂಧ ಬಸವರಾಜ ಮುತಗಿ, ವಿನಾಯಕ ಕಟಗಿ, ವಿಕ್ರಮ್ ಬಳ್ಳಾರಿ, ಕೀರ್ತಿಕುಮಾರ್ ಕುರಹಟ್ಟಿ ಹಾಗೂ ಸಂದೀಪ್ ಎಂಬ ಆರೋಪಿಗಳನ್ನು ನಿನ್ನೆ ಧಾರವಾಡ ಪೊಲೀಸರು ಬಂಧಿಸಿದ್ದರು. ಇಂದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಎರಡು ದಿನಗಳ ಕಾಲ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.
ಯೊಗೀಶಗೌಡ ಗೌಡರ ಅವರನ್ನು ಬುಧವಾರ ಬೆಳಗ್ಗೆ ದುಷ್ಕರ್ವಿುಗಳು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿದ ಹತ್ಯೆ ಮಾಡಿದ್ದರು. ಧಾರವಾಡ ಜಿಲ್ಲಾ ಪಂಚಾಯತಿಯ ಹುಬ್ಬಳಿ ಕ್ಷೇತ್ರದಿಂದ ಯೊಗೀಶಗೌಡ ಆಯ್ಕೆಯಾಗಿದ್ದರು. ಬುಧವಾರ ಬೆಳಗ್ಗೆ ಯೊಗೀಶಗೌಡ ಧಾರವಾಡ ಸಪ್ತಾಪೂರದಲ್ಲಿರುವ ಉದಯ ಹೆಲ್ತ್ ಕ್ಲಬ್, ಫಿಟ್ ನೆಸ್ ಸೆಂಟರ್ಗೆ ತೆರಳಿದ್ದಾಗ ಅವರ ಹತ್ಯೆ ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಪೊಲೀಸ್ ವಶಕ್ಕೆremanded to Police custodyYogesh Gowda murder case5 Accusedಯೋಗೇಶಗೌಡ ಕೊಲೆ ಕೇಸ್5 ಆರೋಪಿಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


