ನೆಲಮಂಗಲ ಬಳಿ ಭೀಕರ ಅಪಘಾತ; ಐವರು ಸ್ಥಳದಲ್ಲೇ ಸಾವು
ನಿಂತಿದ್ದ ಕಂಟೇನರ್ ಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನೆಲಂಗಲದ ಬಳಿ ಸೋಮವಾರ ಬೆಳಗ್ಗೆ ನಡೆದಿದೆ...

ಬೆಂಗಳೂರು: ನಿಂತಿದ್ದ ಕಂಟೇನರ್ ಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನೆಲಂಗಲದ ಬಳಿ ಸೋಮವಾರ ಬೆಳಗ್ಗೆ ನಡೆದಿದೆ.
ನೆಲಮಂಗಲದ ಕೆಂಪೋಹಳ್ಳಿ ಗೇಟ್ ಬಳಿ ಇಂದು ಬೆಳಗ್ಗೆ ಸಂಭವಿಸಿದ ಭೀಕರ ಅಫಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಪ್ರಸ್ತುತ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅವರಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಮೃತರೆಲ್ಲರೂ ಹುಬ್ಬಳ್ಳಿಯ ನರಗುಂದ ನಿವಾಸಿಗಳು ಎಂದು ತಿಳಿದುಬಂದಿದ್ದು, ತುಮಕೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಅಪಘಾತಕ್ಕೆ ಕಾರಿನ ಅತಿವೇಗವೇ ಕಾರಣ ಎಂದು ಹೇಳಲಾಗುತ್ತಿದ್ದು, ವೇಗವಾಗಿ ಬಂದ ಕಾರನ್ನು ನಿಯಂತ್ರಿಸಲಾಗದೇ ಚಾಲಕ ಕಂಟೇನರ್ ಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಇನ್ನು ಅಪಘಾತದ ರಭಸಕ್ಕೆ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ಥವಾಗಿದ್ದು, ಸುಮಾರು ಅರ್ಧಗಂಟೆಯಿಂದ ರಸ್ತೆ ಸಂಚಾರ ಸ್ಥಗಿತವಾಗಿದೆ ಎಂದು ಹೇಳಲಾಗುತ್ತಿದೆ.
ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ದಾಬಸ್ ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


