ಅಂಬಿ ರಾಜೀನಾಮೆ: ಸಾಮೂಹಿಕ ರಾಜೀನಾಮೆ ನೀಡಲು ಮತ್ತಷ್ಟು ಶಾಸಕರ ಬೆದರಿಕೆ
ಶಾಸಕ ಸ್ಥಾನಕ್ಕೆ ನಟ ಅಂಬರೀಷ್ ರಾಜೀನಾಮೆ ಸಲ್ಲಿಸಿರುವ ಹಿನ್ನಲೆಯಲ್ಲಿ ಇದೀಗ ಮತ್ತಷ್ಟು ಶಾಸಕರು ಸಾಮೂಹಿಕವಾಗಿ ರಾಜೀನಾಮೆ...

ಬೆಂಗಳೂರು: ಶಾಸಕ ಸ್ಥಾನಕ್ಕೆ ನಟ ಅಂಬರೀಷ್ ರಾಜೀನಾಮೆ ಸಲ್ಲಿಸಿರುವ ಹಿನ್ನಲೆಯಲ್ಲಿ ಇದೀಗ ಮತ್ತಷ್ಟು ಶಾಸಕರು ಸಾಮೂಹಿಕವಾಗಿ ರಾಜೀನಾಮೆ ಸಲ್ಲಿಸುವುದಾಗಿ ಬೆದರಿಕೆ ಹಾಕಿದ್ದಾರೆಂದು ತಿಳಿದುಬಂದಿದೆ.
ಸಚಿವ ಸ್ಥಾನದಿಂದ ಕೈಬಿಟ್ಟಿರುವುದರಿಂದ ಬೇಸತ್ತಿದ್ದ ಅಂಬರೀಷ್ ಅವರು ನಿನ್ನೆಯಷ್ಟೇ ರಾಜೀನಾಮೆ ಪತ್ರ ಸಲ್ಲಿಸಿದ್ದರು. ತಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಸಹಿ ಮಾಡಿರುವ ಒಂದು ಸಾಲಿನ ರಾಜೀನಾಮೆ ಪತ್ರವನ್ನು ತಮ್ಮ ಆಪ್ತ ಸಹಾಯಕ ಶ್ರೀನಿವಾಸ್ ರೊಂದಿಗೆ ರವಾನಿಸಿದ್ದರು.
ಇದರಂತೆ ಶ್ರೀನಿವಾಸ್ ಅವರು ನಿನ್ನೆ ಮಧ್ಯಾಹ್ನ ಹಂಗಾಮಿ ಸ್ಪೀಕರ್ ಶಿವಶಂಕರ ರೆಡ್ಡಿ ಅವರನ್ನು ಭೇಟಿ ಮಾಡಿ ಅಂಬರೀಷ್ ಅವರು ನೀಡಿದ್ದ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದರು. ಇದನ್ನು ಒಪ್ಪದ ಶಿವಶಂಕರರೆಡ್ಡಿ ಅವರು ಖುದ್ದಾಗಿ ಬಂದು ರಾಜೀನಾಮೆ ಸಲ್ಲಿಸಿದರಷ್ಟೇ ಸ್ಪೀಕರಸಿಲು ಕಾನೂನಿನಲ್ಲಿ ಅವಕಾಶವಿದೆ ಎಂದು ಹೇಳಿ ರಾಜೀನಾಮೆ ಪತ್ರವನ್ನು ತಿರಸ್ಕರಿಸಿದರು.
ಈ ಎಲ್ಲಾ ಬೆಳವಣಿಗೆ ನಂತರ ಜೆಡಿಎಸ್ ನ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಅವರು ಜೆ.ಪಿ. ನಗರದಲ್ಲಿರುವ ಅಂಬರೀಷ್ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದರು. ಬಳಿಕ ಪ್ರತಿಕ್ರಿಯೆ ನೀಡಿರುವ ಶರವಣ ಅವರು, ನೂರು ಕೋಟಿ ಕೊಟ್ಟರೂ ಅಂಬರೀಷ್ ಅವರು ತಮ್ಮ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆಂದು ಹೇಳಿದರು.
ಇದೇ ವೇಳೆ, ಶಾಸಕ ಎಸ್.ಟಿ. ಸೋಮಶೇಖರ್ ಹಾಗೂ ಇನ್ನು ಕೆಲವು ಶಾಸಕಕು ಅಂಬರೀಷ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ರಾಜೀನಾಮೆ ನೀಡದಂತೆ ಮನವಿ ಮಾಡಿಕೊಂಡರು. ಒಂದು ವೇಳೆ ಅಂಬಿರೀಷ್ ಅವರು ರಾಜೀನಾಮೆ ಹಿಂದಕ್ಕೆ ಪಡೆಯದಿದ್ದರೆ ನಾವು ಕೂಡ ಸಾಮೂಹಿಕವಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


