ಪಕ್ಷದಲ್ಲಿ ಉಂಟಾಗಿರುವ ಅಂತರವನ್ನು ಸರಿಪಡಿಸುತ್ತೇನೆ: ದಿನೇಶ್ ಗುಂಡೂರಾವ್
ಸಂಪುಟ ಪುನಾರಚನೆಯಿಂದಾಗಿ ಪಕ್ಷದಲ್ಲಿ ಉಂಟಾಗಿರುವ ಅಂತರವನ್ನು ಸರಿಪಡಿಸುತ್ತೇನೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಬುಧವಾರ ಹೇಳಿದ್ದಾರೆ...

ಬೆಂಗಳೂರು: ಸಂಪುಟ ಪುನಾರಚನೆಯಿಂದಾಗಿ ಪಕ್ಷದಲ್ಲಿ ಉಂಟಾಗಿರುವ ಅಂತರವನ್ನು ಸರಿಪಡಿಸುತ್ತೇನೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಬುಧವಾರ ಹೇಳಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ಬಳಿಕ ಇದೇ ಮೊದಲ ಬಾರಿಗೆ ನಿನ್ನೆ ಪಕ್ಷದ ಕಚೇರಿಗೆ ಆಗಮಿಸಿದ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದು, ರಾಜ್ಯ ಸರ್ಕಾರ ಮತ್ತು ಜನರ ಮಧ್ಯೆ ಉತ್ತಮ ಬಾಂಧವ್ಯ ಏರ್ಪಡಿಸುವಂತೆ ನಿರ್ದೇಶಿಸಲಾಗಿದೆ. ಈ ನಿಟ್ಟಿನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತೇನೆ. ಸಂಪುಟ ಪುನಾರಚನೆ ಬಳಿಕ ಪಕ್ಷ ಹಾಗೂ ಶಾಸಕರ ನಡುವೆ ಅಂತರ ಏರ್ಪಟ್ಟಿದ್ದು, ಈ ಅಂತರವನ್ನು ಸರಿಪಡಿಸುತ್ತೇನೆಂದು ಹೇಳಿದ್ದಾರೆ.
ಅತೃಪ್ತಿಗೊಂಡಿರುವ ಶಾಸಕರನ್ನು ಸಮಾಧಾನಪಡಿಸಲು ನನ್ನಿಂದ ಸಾಧ್ಯವಾದಷ್ಟು ಪ್ರಯತ್ನವನ್ನು ಮಾಡುತ್ತೇನೆ. 2018ರ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಚುನಾವಣೆಯನ್ನು ಗಮನದಲ್ಲಿಟ್ಟಿಕೊಂಡು ಸಂಘಟನೆಯನ್ನು ಬಲಪಡಿಸಲು ಪ್ರಯತ್ನಿಸುತ್ತೇನೆ. ಹಿರಿಯ ನಾಯಕರು ಹಾಗೂ ಕಿರಿಯ ಮುಖಂಡರ ನಡುವೆ ಸಂಪರ್ಕದ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತೇನೆಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


