ರಾಜ್ಯ

ಕೆರೆ ಪ್ರದೇಶಗಳಲ್ಲಿ ನಿರ್ಮಾಣವಾಗಿರುವ ಕಟ್ಟಡಗಳು ಶೀಘ್ರದಲ್ಲೇ ತೆರವು: ಕೋಳಿವಾಡ

ಕೆರೆ ವ್ಯಾಪ್ತಿಯ ಬಫರ್ ರೆನ್ ನಲ್ಲಿ ನಿರ್ಮಾಣವಾಗಿರುವ ಕಟ್ಟಡಗಳನ್ನು ಶೀಘ್ರದಲ್ಲೇ ತೆರವುಗೊಳಿಸಲಾಗುವುದು ಎಂದು ಕೆರೆ ಒತ್ತುವರಿ ತೆರವು ಸದನ ಸಮಿತಿ ಅಧ್ಯಕ್ಷ ಕೆ.ಬಿ. ಕೋಳಿವಾಡ...

ಕೆರೆ ಪ್ರದೇಶಗಳಲ್ಲಿ ನಿರ್ಮಾಣವಾಗಿರುವ ಕಟ್ಟಡಗಳು ಶೀಘ್ರದಲ್ಲೇ ತೆರವು: ಕೋಳಿವಾಡ
ಕೆರೆ ಒತ್ತುವರಿ ತೆರವು ಸದನ ಸಮಿತಿ ಅಧ್ಯಕ್ಷ ಕೆ.ಬಿ. ಕೋಳಿವಾಡ
Published On :

ಬೆಂಗಳೂರು: ಕೆರೆ ವ್ಯಾಪ್ತಿಯ ಬಫರ್ ರೆನ್ ನಲ್ಲಿ ನಿರ್ಮಾಣವಾಗಿರುವ ಕಟ್ಟಡಗಳನ್ನು ಶೀಘ್ರದಲ್ಲೇ ತೆರವುಗೊಳಿಸಲಾಗುವುದು ಎಂದು ಕೆರೆ ಒತ್ತುವರಿ ತೆರವು ಸದನ ಸಮಿತಿ ಅಧ್ಯಕ್ಷ ಕೆ.ಬಿ. ಕೋಳಿವಾಡ ಅವರು ಬುಧವಾರ ಹೇಳಿದ್ದಾರೆ.

ಈ ಕುರಿತಂತೆ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಅವರು, ಕೆರೆ ಪ್ರದೇಶಗಳಲ್ಲಿ ಯಾವುದೇ ಕಟ್ಟಡ ನಿರ್ಮಾಣಕ್ಕೂ ಇನ್ನು ಮುಂದೆ ಅನುಮತಿಯನ್ನು ನೀಡುವುದಿಲ್ಲ ಎಂದು ಹೇಳಿದ್ದಾರೆ.

ಅರಕೆರೆ ಹಾಗೂ ಹುಳಿಮಾವು ಪ್ರದೇಶದಲ್ಲಿ ವಾಲ್ ಮಾರ್ಕ್ ಕಂಪನಿ ಕೆರೆ ಒತ್ತುವರಿ ಮಾಡಿ 34 ವಸತಿ ಕಟ್ಟಡ ನಿರ್ಮಾಣ ಮಾಡಿತ್ತು. ಆ ಕಟ್ಟದ ಬಫರ್ ರೆನ್ ವ್ಯಾಪ್ತಿಗೆ ಬರುತ್ತಿದ್ದು, ಮನೆಗಳನ್ನು ವಿತರಣೆ ಮಾಡದಂತೆ ಈಗಾಗಲೇ ನೋಟಿಸ್ ಜಾರಿ ಮಾಡಲಾಗಿದೆ. ಇಷ್ಟಾದರೂ ಕಟ್ಟಣ ನಿರ್ಮಾಣ ಮಾಡಿದ್ದು, ಕಟ್ಟಡ ತೆರವಿಗೆ ಆದೇಶ ನೀಡಲಾಗಿದೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.