ಕಲಬುರ್ಗಿ ರ್ಯಾಗಿಂಗ್ ಕೇಸ್: ತಪ್ಪಾಗಿ ಕೊಲೆ ಯತ್ನ ಪ್ರಕರಣ ದಾಖಲಿಸಿದ ಕೇರಳ, ಕರ್ನಾಟಕದಿಂದ ತನಿಖೆ
ನಗರದ ಖಾಸಗಿ ನರ್ಸಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ಕೇರಳದ ದಲಿತ ವಿದ್ಯಾರ್ಥಿನಿಯೊಬ್ಬಳ ಮೇಲೆ ನಡೆದಿದೆ ಎನ್ನಲಾಗುತ್ತಿರುವ...
Published On :
ಕಲಬುರ್ಗಿ: ನಗರದ ಖಾಸಗಿ ನರ್ಸಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ಕೇರಳದ ದಲಿತ ವಿದ್ಯಾರ್ಥಿನಿಯೊಬ್ಬಳ ಮೇಲೆ ನಡೆದಿದೆ ಎನ್ನಲಾಗುತ್ತಿರುವ ರ‍್ಯಾಗಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ತಪ್ಪಾಗಿ ಕೊಲೆ ಯತ್ನ ಮತ್ತು ಅಟ್ರೊಸಿಟಿ ಕೇಸ್ ದಾಖಲಿಸಿದ್ದಾರೆ ಎಂದು ಗುರುವಾರ ಕರ್ನಾಟಕ ಪೊಲೀಸರು ಹೇಳಿದ್ದಾರೆ.
ಈ ಸಂಬಂಧ ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕಲಬುರ್ಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಶಿಕುಮಾರ್ ಅವರು, ಪ್ರಕರಣ ಸಂಬಂಧ ಐವರು ಆರೋಪಿಗಳ ವಿರುದ್ಧ ಕೇರಳ ಪೊಲೀಸರು ದಾಖಲಿಸಿರುವ ಎಫ್ಐಆರ್ ಅನ್ನು ನಾವು ಸ್ವೀಕರಿಸಿದ್ದೇವೆ ಎಂದರು.
'ಕೇರಳ ಪೊಲೀಸರು ಕಳುಹಿಸಿರುವ ಎಫ್ಐಆರ್ ಪ್ರತಿ ನಮಗೆ ತಲುಪಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು. ಅಲ್ಲದೆ ಕೇರಳ ಪೊಲೀಸರಿಂದ ತಮಗೆ ಬಂದಿರುವ ಮಾಹಿತಿ ಪ್ರಕಾರ, ತಪ್ಪು ಗ್ರಹಿಕೆಯಿಂದ ಕೊಲೆಯತ್ನ ಹಾಗೂ ಅಟ್ರೊಸಿಟಿ ಕೇಸ್ ದಾಖಲಿಸಿದ್ದಾರೆ. ಆದರೆ ಈ ಸಂಬಂಧ ನಾವು ಇದುವರೆಗೂ ಯಾರನ್ನು ಬಂಧಿಸಿಲ್ಲ' ಎಂದರು.
ತನ್ನ ಮೇಲೆ ರ್ಯಾಗಿಂಗ್ ನಡೆಸಿದ ಹಿರಿಯ ವಿದ್ಯಾರ್ಥಿನಿಯರು ಬಲವಂತವಾಗಿ ಟಾಯ್ಲೆಟ್ ಕ್ಲೀನರ್ ಕುಡಿಸಿದ್ದಾರೆ ಎಂದು ಆರೋಪಿಸಿರುವ ಅಲ್ ಖಮರ್ ನರ್ಸಿಂಗ್ ಕಾಲೇಜ್ ನ ಮೊದಲ ವರ್ಷದ ವಿದ್ಯಾರ್ಥಿನಿ ಈಗ ಕೋಝಿಕೋಡ್ ವೈದ್ಯಕೀಯ ಕಾಲೇಜ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ವಸತಿ ನಿಲಯದ ವಾರ್ಡನ್ ಎಸ್ಥಾರ್ ಅವರು, ವಿದ್ಯಾರ್ಥಿನಿ ಮೇಲೆ ಯಾವುದೇ ರ‍್ಯಾಗಿಂಗ್ ನಡೆದಿಲ್ಲ, ಬದಲಿಗೆ ಆಕೆ ಆತ್ಮಹತ್ಯೆಗೆ ಯತ್ನಿಸಿದ್ದಳು ಎಂದು ಸ್ಪಷ್ಟಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

