ರ‍್ಯಾಗಿಂಗ್ ಪ್ರಕರಣಕ್ಕೆ ಹೊಸ ಟ್ವಿಸ್ಟ್: ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದಳು ಎಂದ ವಾರ್ಡನ್
ನಗರದ ಖಾಸಗಿ ನರ್ಸಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ಕೇರಳ ವಿದ್ಯಾರ್ಥಿನಿಯೊಬ್ಬಳ ಮೇಲೆ ನಡೆದಿದೆ ಎನ್ನಲಾಗುತ್ತಿದ್ದ ರ‍್ಯಾಗಿಂಗ್ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿನಿ ಮೇಲೆ ಯಾವುದೇ...

ಕಲಬುರಗಿ: ನಗರದ ಖಾಸಗಿ ನರ್ಸಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ಕೇರಳ ವಿದ್ಯಾರ್ಥಿನಿಯೊಬ್ಬಳ ಮೇಲೆ ನಡೆದಿದೆ ಎನ್ನಲಾಗುತ್ತಿದ್ದ ರ‍್ಯಾಗಿಂಗ್ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿನಿ ಮೇಲೆ ಯಾವುದೇ ರ‍್ಯಾಗಿಂಗ್ ನಡೆದಿರಲಿಲ್ಲ, ಬದಲಿಗೆ ಆಕೆ ಆತ್ಮಹತ್ಯೆಗೆ ಯತ್ನಿಸಿದ್ದಳು ಎಂದು ವಸತಿ ನಿಲಯದ ಅಧಿಕಾರಿಗಳು ಬುಧವಾರ ಸ್ಪಷ್ಟಪಡಿಸಿದ್ದಾರೆ.
ಈ ಕುರಿತಂತೆ ಮಾತನಾಡಿರುವ ವಸತಿ ನಿಲಯದ ವಾರ್ಡನ್ ಎಸ್ಥಾರ್, ಕೇರಳ ವಿದ್ಯಾರ್ಥಿನಿ ಮೇಲೆ ಹಿರಿಯ ವಿದ್ಯಾರ್ಥಿಗಳು ಯಾವುದೇ ರ‍್ಯಾಗಿಂಗ್ ಮಾಡಿರಲಿಲ್ಲ. ಆಕೆ, ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಳು ಎಂದು ಹೇಳಿಕೊಂಡಿದ್ದಾರೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಎಶ್ ಶಶಿಕುಮಾರ್ ಅವರು ಪ್ರಕರಣ ಸಂಬಂಧ ಶೀಘ್ರಗತಿಯಲ್ಲಿ ತನಿಖೆ ನಡೆಸುವ ಸಲುವಾಗಿ ವಿಶೇಷ ತನಿಖಾಧಿಕಾರಿಯಾಗಿ ಡಿವೈಎಸ್ ಪಿ ಜಾನ್ಹವಿಯವರನ್ನು ನೇಮಿಸಿದ್ದಾರೆ.
ಘಟನೆ ಕುರಿತಂತೆ ಮಾತನಾಡಿರುವ ಎಸ್ ಪಿ. ಶಶಿಕುಮಾರ್ ಅವರು, ಪ್ರಸ್ತುತ ನಮಗೆ ಬಂದಿರುವ ಮಾಹಿತಿ ಪ್ರಕಾರ, ವಿದ್ಯಾರ್ಥಿನಿ ಕೇರಳದ ಕೋಝಿಕೋಡ್ ಮೂಲದವಳಾಗಿದ್ದಾಳೆಂದು ತಿಳಿದುಬಂದಿದೆ. ಸಂತ್ರಸ್ತೆ ಮೇಲೆ 8 ಹಿರಿಯ ವಿದ್ಯಾರ್ಥಿನಿಯರಿಂದ ರ‍್ಯಾಗಿಂಗ್ ನಡೆದಿದ್ದು, ಜಾತಿ ಕುರಿತಂತೆ ವಿದ್ಯಾರ್ಥಿನಿಗೆ ನಿಂದಿಸಲಾಗಿದೆ. ಅಲ್ಲದೆ, ವಿದ್ಯಾರ್ಥಿನಿಗೆ ಬಲವಂತವಾಗಿ ಟಾಯ್ಲೆಟ್ ಕ್ಲೀನರ್ ಕುಡಿಯುವಂತೆ ಮಾಡಲಾಗಿದೆ ಎಂದು ವಿದ್ಯಾರ್ಥಿನಿ ಎಫ್ಐಆರ್ ನಲ್ಲಿ ದಾಖಲಿಸಿದ್ದಾಳೆಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


