ರಸ್ತೆ ಅಪಘಾತ: ರಾಮನಗರಪುರ ಠಾಣೆ ಎಎಸ್ಐ ನಾಗರಾಜು ಮತ್ತು ಪತ್ನಿ ದುರ್ಮರಣ
ರಸ್ತೆ ಅಪಘಾತದಲ್ಲಿ ರಾಮನಗರ ಪೊಲೀಸ್ ಠಾಣೆಯ ಎಎಸ್ಐ ಮತ್ತು ಪತ್ನಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿ ಬಸವನಪುರ ಬಳಿ...

ರಾಮನಗರ: ರಸ್ತೆ ಅಪಘಾತದಲ್ಲಿ ರಾಮನಗರ ಪೊಲೀಸ್ ಠಾಣೆಯ ಎಎಸ್ಐ ಮತ್ತು ಪತ್ನಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿ ಬಸವನಪುರ ಬಳಿ ನಡೆದಿದೆ.
ಮೃತ ದುರ್ದೈವಿಗಳನ್ನು ಎಎಸ್ಐ 56 ವರ್ಷದ ನಾಗರಾಜು ಮತ್ತು ಪತ್ನಿ 50 ವರ್ಷದ ಉಮಾ ಎಂದು ಗುರುತಿಸಲಾಗಿದೆ. ರಾಮನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜು ಅವರು ಇತ್ತೀಚೆಗಷ್ಟೇ ಎಎಸ್ಐ ಆಗಿ ಬಡ್ತಿ ಪಡೆದಿದ್ದರು.
ಇಂದು ಬೆಳಗ್ಗೆ ಬೆಂಗಳೂರಿನಿಂದ ರಾಮನಗರಕ್ಕೆ ಬರುತ್ತಿದ್ದ ವೇಳೆ ಜಿಪ್ಸಿ ಡಿವೈಡರ್ ಗೆ ಡಿಕ್ಕಿ ಹೊಡೆದು ನಂತರ ಜುಪಿಟರ್ ವಾಹನಕ್ಕೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
ರಾಮನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


