ರಾಜ್ಯ

ಮಹಿಳೆಯಿಂದ ಸಿಎಂ ಸಿದ್ದರಾಮಯ್ಯ ಕೆನ್ನೆಗೆ 'ಸಿಹಿಮುತ್ತಿ' ನ ಭಾಗ್ಯ

ಸಿಎಂ ಸಿದ್ದರಾಮಯ್ಯ ಅವರ ಕೆನ್ನೆಗೆ ಬಹಿರಂಗ ಸಮಾರಭಂದಲ್ಲಿ ಮಹಿಳೆಯೊಬ್ಬಳು ಮುತ್ತಿಟ್ಟು ಸಂಭ್ರಮಿಸಿದ್ದಾರೆ.ನಗರದ ಅರಮನೆ ಮೈದಾನದಲ್ಲಿ ಕುರುಬ ಸಮಾಜದ ಜನಪ್ರತಿನಿಧಿಗಳಿಗೆ ಸನ್ಮಾನ

ಮಹಿಳೆಯಿಂದ ಸಿಎಂ ಸಿದ್ದರಾಮಯ್ಯ ಕೆನ್ನೆಗೆ 'ಸಿಹಿಮುತ್ತಿ' ನ ಭಾಗ್ಯ
ಸಿಎಂ ಸಿದ್ದರಾಮಯ್ಯಗೆ ಮುತ್ತಿಟ್ಟ ಮಹಿಳೆ
Published On :

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಕೆನ್ನೆಗೆ ಬಹಿರಂಗ ಸಮಾರಭಂದಲ್ಲಿ ಮಹಿಳೆಯೊಬ್ಬಳು ಮುತ್ತಿಟ್ಟು ಸಂಭ್ರಮಿಸಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ಕುರುಬ ಸಮಾಜದ ಜನಪ್ರತಿನಿಧಿಗಳಿಗೆ ಸನ್ಮಾನ ಸಮಾರಂಭ ಏರ್ಪಡಿಸಲಾಗಿತ್ತು. ಈ ವೇಳೆ ವೇದಿಕೆಗೆ ಬಂದ ತರಿಕೆರೆ ತಾಲೂಕು ಪಂಚಾಯಿತಿ ಸದಸ್ಯೆ ಗಿರಿಜಾ ಶ್ರೀನಿವಾಸ್  ಮೊದಲು ಫೋಟೋಗೆ ಪೋಸ್ ನೀಡಿ ನಂತರ ಸಿದ್ದರಾಮಯ್ಯ ಅವರ ಕೆನ್ನೆಗೆ ಮುತ್ತಿಟ್ಟರು. ನಂತರ ಸಿದ್ದರಾಮಯ್ಯ ನಾಚಿಕೆಯಿಂದ ಕೆನ್ನೆ ಒರೆಸಿಕೊಂಡಿದ್ದಾರೆ. ಇದನ್ನು ನಿರೀಕ್ಷಿಸದೇ ಇದ್ದ ಸಿದ್ದರಾಮಯ್ಯ ಒಂದು ಕ್ಷಣ ಅವಕ್ಕಾದರು.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಗಿರಿಜಾ ಶ್ರೀನಿವಾಸ್ ತಾವು ಚಿಕ್ಕಂದಿನಿಂದಲೂ ಸಿದ್ದರಾಮಯ್ಯ ಅವರ ಅಭಿಮಾನಿಯಾಗಿದ್ದು, ಅವರೇ ನನ್ನ ರಾಜಕೀಯಕ್ಕೆ ಸ್ಪೂರ್ತಿಯಾಗಿದ್ದಾರೆ. ಇದೇ ಮೊದಲ ಬಾರಿಗೆ ಅವರನ್ನು ನೋಡಿದ ಖುಷಿಗೆ ತಾವು ಅವರಿಗೆ ಮುತ್ತು ನೀಡಿದ್ದಾಗಿ ಅವರು ಹೇಳಿದ್ದಾರೆ.  ನನ್ನ ಜೀವನದಲ್ಲಿ ಇದು ಮರೆಯಲಾರದ ದಿನ ಎಂದು ಆಕೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.