ರಾಜ್ಯ

ಅಮೆರಿಕದಲ್ಲಿ ಸ್ನಾತಕೋತ್ತರ ಮುಗಿಸಿದ ನಂತರ ಭಾರತಕ್ಕೆ ಬನ್ನಿ

ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ (ಐಐಎಸ್ ಸಿ) ಶನಿವಾರ ನಡೆದ ಘಟಿಕೋತ್ಸವ ಕಾರ್ಯಕ್ರಮದಲ್ಲಿ 593 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು...

ಅಮೆರಿಕದಲ್ಲಿ ಸ್ನಾತಕೋತ್ತರ ಮುಗಿಸಿದ ನಂತರ ಭಾರತಕ್ಕೆ ಬನ್ನಿ
ಘಟಿಕೋತ್ಸವದಲ್ಲಿ ಸಂಭ್ರಮಿಸುತ್ತಿರುವ ವಿದ್ಯಾರ್ಥಿಗಳು
Published On :

ಬೆಂಗಳೂರು: ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ (ಐಐಎಸ್ ಸಿ) ಶನಿವಾರ ನಡೆದ ಘಟಿಕೋತ್ಸವ ಕಾರ್ಯಕ್ರಮದಲ್ಲಿ 593 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

ವಿದ್ಯಾರ್ಥಿಗಳಿಗೆ ಪಿಹೆಚ್ ಡಿ. ಎಂ.ಇ, ಎಂ.ಎಸ್. ಎಂಡಿಇಎಸ್ ಮತ್ತು ಮ್ಯಾನೇಜ್ ಮೆಂಟ್ ವಿಷಯದಲ್ಲಿ ಪದವಿ ಪ್ರದಾನ ಮಾಡಲಾಯಿತು. 56 ವಿದ್ಯಾರ್ಥಿಗಳು ಚಿನ್ನದ ಪದಕ ಪಡೆದುಕೊಂಡಿದ್ದಾರೆ.

ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿರುವ ಕೇಂದ್ರ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರ ಆರ್. ಚಿದಂಬರಂ ಅವರು, ಭಾರತ ಅಭಿವೃದ್ಧಿಗೊಳ್ಳುತ್ತಿದ್ದು, ವಿದ್ಯಾರ್ಥಿಗಳು ತಮ್ಮ ಸ್ನಾತಕೋತ್ತರ ಪದವಿಯನ್ನು ಅಮೆರಿಕದಲ್ಲಿ ಪೂರ್ಣಗೊಳಿಸಿದ್ದರೂ ಕೂಡ ತಮ್ಮ ಸಂಶೋಧನೆಯನ್ನು ದೇಶದಲ್ಲಿ ಮುಂದುವರೆಸಬೇಕೆಂದು ಹೇಳಿದ್ದಾರೆ.

ಭಾರತ ವಿಶ್ವದಲ್ಲಿ ಪ್ರಬಲ ರಾಷ್ಟ್ರವಾಗಲು ತಂತ್ರಾಂಶ ಅಭಿವೃದ್ಧಿ ಪಡಿಸಬೇಕು. ಭಾರತ ಅಂತಹ ಮಟ್ಟ ತಲುಪಲು ಹಾಗೂ ಅಭಿವೃದ್ಧಿ ರಾಷ್ಟ್ರವಾಗಲು ಭಾರತೀಯ ವಿಜ್ಞಾನ ಸಂಸ್ಥೆ ಸಹಾಯ ಮಾಡಬೇಕಿದೆ. ಭಾರತ ತಂತ್ರಜ್ಞಾನಗಳನ್ನು ಸ್ಥಾಪಿಸಲು ಪ್ರಯತ್ನಗಳನ್ನು ಮಾಡುತ್ತಿದೆ. ಆದರೆ, ಇದಕ್ಕೆ ಮೂಲಭೂತ ಸಂಶೋಧನೆ ಎಂಬ ಬಲವಾದ ಅಡಿಪಾಯದ ಅಗತ್ಯವಿದೆ. ಉನ್ನತ ಶಿಕ್ಷಣಕ್ಕೆ ನಮಗೆ ಉತ್ತಮ ಪರಿಸರ ವ್ಯವಸ್ಥೆ ಹಾಗೂ ವಿಶ್ವವಿದ್ಯಾಲಯದ ಸಂಶೋಧನೆಗಳ ಅಗತ್ಯವಿದೆ. ಪ್ರತಿಭಾನ್ವಿತ ಯುವ ವಿದ್ಯಾರ್ಥಿಗಳು, ಉತ್ತಮ ಗುಣಮಟ್ಟದ ಬೋಧಕವರ್ಗ, ಆರ್ಥಿಕ ಶಕ್ತಿ ಹಾಗೂ ಮೂಲಭೂತಗಳ ಅಗತ್ಯವಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.