ಹಾಡುಹಗಲೇ ಯುವಕನನ್ನು ನಡುರಸ್ತೆಯಲ್ಲಿ ಹಿಗ್ಗಾಮುಗ್ಗ ಥಳಿಸಿದ ದುಷ್ಕರ್ಮಿಗಳು
ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದಾನೆಂಬ ಕಾರಣಕ್ಕೆ ಹಾಡುಹಗಲೇ ಯುವಕನೊಬ್ಬನನ್ನು ನಡುರಸ್ತೆಯಲ್ಲಿ ಹಿಗ್ಗಾಮುಗ್ಗ ಥಳಿಸಿರುವ ಅಮಾನುಷ ಘಟನೆಯೊಂದು ನಂದಿನಿ ಲೇ ಔಟ್ ಬಳಿಯಿರುವ...

ಬೆಂಗಳೂರು: ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದಾನೆಂಬ ಕಾರಣಕ್ಕೆ ಹಾಡುಹಗಲೇ ಯುವಕನೊಬ್ಬನನ್ನು ನಡುರಸ್ತೆಯಲ್ಲಿ ಹಿಗ್ಗಾಮುಗ್ಗ ಥಳಿಸಿರುವ ಅಮಾನುಷ ಘಟನೆಯೊಂದು ನಂದಿನಿ ಲೇ ಔಟ್ ಬಳಿಯಿರುವ ಲಗ್ಗೆರೆಯಲ್ಲಿ ಶುಕ್ರವಾರ ನಡೆದಿದೆ.
ದರ್ಶನ್ (24) ಹಲ್ಲೆಗೊಳಗಾಗಿರುವ ವ್ಯಕ್ತಿ. ಈತ ಖಾಸಗಿ ಕಂಪನಿಯೊಂದರಲ್ಲಿ ಭದ್ರತಾ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾನೆ. ಅಗರಬತ್ತಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ.
ಯುವತಿಯನ್ನು ಮಾತನಾಡಿಸಲೆಂದು ಆಕೆಯ ಸಂಬಂಧಿಕರಾದ ನರೇಂದ್ರ ಮತ್ತು ಉದಯ್ ಎಂಬುವವರು ಫ್ಯಾಕ್ಟರಿಗೆ ಬಂದಿದ್ದಾರೆ. ಈ ವೇಳೆ ಇಬ್ಬರ ಪ್ರೀತಿ ವಿಚಾರ ತಿಳಿದು ಮಾತನಾಡಬೇಕೆಂದು ಹೇಳಿ ದರ್ಶನ್ ನನ್ನು ಕರೆದುಕೊಂಡು ಹೋಗಿದ್ದಾರೆ. ಮಾತುಕತೆ ವೇಳೆ ವಾಗ್ವಾದ ನಡೆದಿದೆ. ನಂತರ ಮೂವರು ಯುವಕರು ನಡುರಸ್ತೆಯಲ್ಲಿ ದರ್ಶನ್ ನ್ನು ಮನಬಂದಂತೆ ಥಳಿಸಿದ್ದಾರೆ. ಈ ವೇಳೆ ಯುವತಿ ಅಡ್ಡ ಹೋದಾಗ ಆಕೆಯ ಮೇಲೂ ಯುವಕರು ಹಲ್ಲೆ ನಡೆಸಿದ್ದಾರೆ.
ಯುವಕರ ಕಿತ್ತಾಟವನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರೂ ಕೂಡ ಪೊಲೀಸರು ಸ್ಥಳಕ್ಕೆ ಹೋಗಿಲ್ಲ. ನಂತರ ಗಾಯಗೊಂಡು ನರಳುತ್ತಿದ್ದ ಆತನನ್ನು ಸ್ಥಳೀಯರೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ಆತ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾನೆ.
ಈ ಎಲ್ಲಾ ದೃಶ್ಯವನ್ನು ದಾರಿಯಲ್ಲಿ ಹೋಗುವ ವ್ಯಕ್ತಿಯೊಬ್ಬ ವಿಡಿಯೋ ಮಾಡಿದ್ದು, ವಿಡಿಯೋವನ್ನು ಖಾಸಗಿ ಮಾಧ್ಯಮವೊಂದಕ್ಕೆ ನೀಡಿದ್ದಾನೆ. ವಿಡಿಯೋವನ್ನು ಪರಿಶೀಲಿಸಿರುವ ರಾಜಗೋಪಾಲನಗರ ಪೊಲೀಸರು ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


