ವಿನಾಯಕ ಬಾಳಿಗ ಕೊಲೆ ಪ್ರಕರಣ: ನರೇಶ್ ಶೆಣೈ ಬಂಧನ
ಮಾಹಿತಿ ಹಕ್ಕು ಕಾರ್ಯಕರ್ತ ವಿನಾಯಕ ಬಾಳಿಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಯುವ ಬ್ರಿಗೇಡ್ ಮುಖಂಡ ನರೇಶ್ ಶೆಣೈ ಅವರನ್ನು ಪೊಲೀಸರು...

ಮಂಗಳೂರು: ಮಾಹಿತಿ ಹಕ್ಕು ಕಾರ್ಯಕರ್ತ ವಿನಾಯಕ ಬಾಳಿಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಯುವ ಬ್ರಿಗೇಡ್ ಮುಖಂಡ ನರೇಶ್ ಶೆಣೈ ಅವರನ್ನು ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ.
ನಿನ್ನೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿರುವ ನಗರ ಪೊಲೀಸರ್ ಆಯುಕ್ತ ಎಂ.ಚಂದ್ರಶೇಖರ್ ಅವರು, ವಿನಾಯಕ ಬಾಳಿಕ ಕೊಲೆ ನಡೆದಿ ದಿನದಿಂದಲೂ ನರೇಶ್ ಶೆಣೈ ತಲೆಮರೆಸಿಕೊಂಡಿದ್ದ. ಕೊಲೆಯಾದ ದಿನದಿಂದಲೂ ನರೇಶ್ ಶೆಣೈ ಗಾಗಿ ಹುಡುಕಾಟ ಆರಂಭಿಸಲಾಗಿತ್ತು. ಇದರಂತೆ ಖಚಿ ಮಾಹಿತಿ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ್ದ ಸಿಸಿಬಿ ಇನ್ಸ್ ಪೆಕ್ಟರ್ ವೆಲೆಂಟೈನ್ ಡಿಸೋಜ ನೇತೃತ್ವದ ತಂಡ ಶೆಣೈ ಅವರನ್ನು ಬಂಧನಕ್ಕೊಳಪಡಿಸುವಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದ್ದಾರೆ.
ಆರ್ ಟಿಐ ಕಾರ್ಯಕರ್ತನಾಗಿದ್ದ ವಿನಾಯಕ ಬಾಳಿಗ ಮೇಲೆ ಮಾ.21 ರಂದು ದುಷ್ಕರ್ಮಿಗಳು ಹಲ್ಲೆ ನಡೆಸಿ ಹತ್ಯೆ ಮಾಡಿದ್ದರು. ಈ ಸಂಬಂಧ ವಿನೀತ್ ಪೂಜಾರಿ, ನಿಶಾಂತ್ ದೇವಾಡಿಗ ಸೇರಿ ನಾಲ್ವರನ್ನು ಪೊಲೀಸರು ಈಗಾಗಲೇ ಬಂಧನಕ್ಕೊಳಪಡಿಸಿದ್ದಾರೆ. ಇದೀಗ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಎಂದು ಹೇಳಲಾಗುತ್ತಿದ್ದ ನರೇಶ್ ಶೆಣೈ ಅವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


