ಶಾಸಕರ ಭವನದಲ್ಲಿ ಬಾಂಬ್ ಪ್ರಕರಣ: ಗಿರೀಶ್ ಮಟ್ಟೆಣ್ಣನವರ್ ಖುಲಾಸೆ
2003ರ ಶಾಸಕರ ಭವನದಲ್ಲಿ ನೆಲೆಸಿರುವ 'ಭ್ರಷ್ಟ ರಾಜಕಾರಣಿ'ಗಳನ್ನು ಬೆದರಿಸಲು ಬಾಂಬ್ ಇಟ್ಟ ಪ್ರಕರಣದ ಪ್ರಮುಖ ಆರೋಪಿ ಗಿರೀಶ್ ಮಟ್ಟಣ್ಣನವರ್ ಹಾಗೂ...

Published On :
ಬೆಂಗಳೂರು: 2003ರ ಶಾಸಕರ ಭವನದಲ್ಲಿ ನೆಲೆಸಿರುವ 'ಭ್ರಷ್ಟ ರಾಜಕಾರಣಿ'ಗಳನ್ನು ಬೆದರಿಸಲು ಬಾಂಬ್ ಇಟ್ಟ ಪ್ರಕರಣದ ಪ್ರಮುಖ ಆರೋಪಿ ಗಿರೀಶ್ ಮಟ್ಟಣ್ಣನವರ್ ಹಾಗೂ ಇತರೆ ಇಬ್ಬರು ಆರೋಪಿಗಳನ್ನು ಸೋಮವಾರ ಕೋರ್ಟ್ ಖುಲಾಸೆಗೊಳಿಸಿ ತೀರ್ಪು ನೀಡಿದೆ.
ಸುಮಾರು 13 ವರ್ಷಗಳ ನಂತರ ಇಂದು ಪ್ರಕರಣದ ಅಂತಿಮ ತೀರ್ಪು ಪ್ರಕಟಿಸಿದ ನಗರದ 66ನೇ ಸಿವಿಲ್ ಹಾಗೂ ಸೆಷೆನ್ಸ್ ಕೋರ್ಟ್, ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಮೊದಲ ಆರೋಪಿ ಗಿರೀಶ್ ಮಟ್ಟೆಣ್ಣನವರ್ ಹಾಗೂ ಇತರೆ ಇಬ್ಬರು ಆರೋಪಿಗಳನ್ನು ಖುಲಾಸೆಗೊಳಿಸಿದೆ.
ಶಾಸಕರ ಭವನದಲ್ಲಿ ಜಿಲೆಟಿನ್ ಕಡ್ಡಿ ಇಟ್ಟು ಹುಸಿ ಬಾಂಬ್ ಕರೆ ಮಾಡಿದ್ದ ಘಟನೆಯಲ್ಲಿ ಸಾಕ್ಷ್ಯಾಧಾರದ ಕೊರತೆಯ ಹಿನ್ನೆಲೆಯಲ್ಲಿ ಖುಲಾಸೆಗೊಳಿಸಿರುವುದಾಗಿ ನ್ಯಾಯಾಲಯ ಹೇಳಿದೆ.
ಶಾಸಕರ ಭವನದಲ್ಲಿ ನೆಲೆಸಿರುವ ಭ್ರಷ್ಟ ರಾಜಕಾರಣಿಗಳನ್ನು ಬೆದರಿಸುವ ನಿಟ್ಟಿನಲ್ಲಿ ಅಂದು (2003) ಎಸ್ ಐ ಆಗಿದ್ದ ಮಟ್ಟಣ್ಣನವರ್ ಬಾಂಬ್ ಇಟ್ಟಿರುವುದಾಗಿ ಹುಸಿ ಕರೆ ಮಾಡಿ ರಾಜ್ಯಾದ್ಯಂತ ಸುದ್ದಿಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


