ಬೆಂಗಳೂರು : ಟ್ರಯಲ್ ನೋಡುವುದಾಗಿ ಹೇಳಿ ಕಾರು ಕದ್ದು ಪರಾರಿಯಾಗಿದ್ದ ಕಳ್ಳನ ಬಂಧನ
:ಓಎಲ್‌ಎಕ್ಸ್ ನಲ್ಲಿ ಮಾರಾಟಕ್ಕಾಗಿ ಇಟ್ಟಿದ್ದ ಕಾರನ್ನು ಟ್ರಯಲ್ ನೋಡುವುದಾಗಿ ಹೇಳಿ ಪರಾರಿಯಾಗಿದ್ದ ಖದೀಮನನ್ನು ಬೆಂಗಳೂರು ಪೊಲೀಸರು...

ಬೆಂಗಳೂರು :ಓಎಲ್‌ಎಕ್ಸ್ ನಲ್ಲಿ ಮಾರಾಟಕ್ಕಾಗಿ ಇಟ್ಟಿದ್ದ ಕಾರನ್ನು ಟ್ರಯಲ್ ನೋಡುವುದಾಗಿ ಹೇಳಿ ಪರಾರಿಯಾಗಿದ್ದ ಖದೀಮನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಸುನೀಲ್ ಬಂಧಿತ ಆರೋಪಿಯಾಗಿದ್ದಾನೆ. ಈತ ಜೂನ್ 18 ರಂದು ಅಭಿಷೇಕ್ ಎನ್ನುವವರು ಮಾರಾಟ ಮಾಡಲು ಮುಂದಾಗಿದ್ದ ಸ್ಕ್ವಾರ್ಪಿಯೋ ಕಾರನ್ನು ಟೆಸ್ಟ್ ಡ್ರೈವ್ ಮಾಡುವುದಾಗಿ ಹೋದಾದ ಮರಳಿ ಬಾರದೇ ನಾಪತ್ತೆಯಾಗಿದ್ದ.
ಗಂಟೆಗಳ ಕಾಲ ಕಾದರೂ ವಾಪಾಸ್ ಬರದಿದ್ದಾಗ ಆತಂಕಗೊಂಡ ಅಭಿಷೇಕ್ ಅವರು ಸುನೀಲ್ ಮೊಬೈಲ್ ಗೆ ಕರೆ ಮಾಡಿದಾಗ ಸ್ವಿಚ್ ಆಫ್ ಬಂದಿದೆ. ಬಳಿಕ ವೈಟ್ ಫೀಲ್ಡ್ ಪೊಲೀಸರಿಗೆ ದೂರುನೀಡಲಾಗಿತ್ತು.
ದೂರಿನನ್ವಯ ಕಳ್ಳನ ಪತ್ತೆಗಾಗಿ ಬಲೆ ಬೀಸಿದ್ದ ಪೊಲೀಸರು ಮಂಗಳವಾರ ಸಂಜೆ ಸರ್ಜಾಪುರದ ವಿದ್ಯಾನಗರ ಬಳಿ ಸುನೀಲ್ ನನ್ನು ಕಾರು ಸಮೇತ ವಶಕ್ಕೆ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


