ರಾಜ್ಯದಲ್ಲಿ ಮಳೆ: ಕಬಿನಿ, ಕೆಆರ್ ಎಸ್ ಜಲಾಶಯಗಳ ನೀರಿನ ಮಟ್ಟ ಏರಿಕೆ
ರಾಜ್ಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಲವು ಜಲಾಶಯಗಳ ನೀರಿನ ಮಟ್ಟ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ...

ಬೆಂಗಳೂರು: ರಾಜ್ಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಲವು ಜಲಾಶಯಗಳ ನೀರಿನ ಮಟ್ಟ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರಾವಳಿ ತೀರ, ದಕ್ಷಿಣ ಒಳನಾಡು ಮಲೆನಾಡು ಭಾಗಗಳಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಆ ಭಾಗದ ಜಲಾಶಾಯಗಳ ನೀರಿನ ಮಟ್ಟ ಗಣನೀಯವಾಗಿ ಹೆಚ್ಚಳವಾಗುತ್ತಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿಯಂತ್ರಣ ಕೇಂದ್ರ ಅಧಿಕಾರಿ ತಿಳಿಸಿದ್ದಾರೆ,
ಮುಂಗಾರು ಮಳೆಯ ಅಬ್ಬರಕ್ಕೆ ಪ್ರಮುಖ ನದಿಗಳಾದ ಕಾಳಿ, ತುಂಗಾ ಮತ್ತು ಭದ್ರಾ ಜಲಾಶಯ ಹಾಗೆಯೇ, ಲಿಂಗನಮಕ್ಕಿ, ಸುಪಾ, ವಾರಾಹಿ, ಹಾರಂಗಿ ಮತ್ತು ಹೇಮಾವತಿ ಮತ್ತು ಕೆಆರ್ ಎಸ್, ಕಬಿನಿ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಜೊತೆಗೆ ಕಾವೇರಿ, ಘಟಪ್ರಭ, ಮಲಪ್ರಭ ನದಿಗಳಲ್ಲಿ ನೀರನ ಮಟ್ಟ ಹೆಚ್ಚಿದೆ, ಕೃಷ್ಣಾ ನದಿಯ ಆಲಮಟ್ಟಿ ಜಲಾಶಯದಲ್ಲೂ ಕೂಡ ನೀರಿನ ಪ್ರಮಾಣ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಮುಂದಿನ 24 ಗಂಟೆಗಳಲ್ಲಿ ಕರಾವಳಿ ತೀರ ಪ್ರದೇಶ, ದಕ್ಷಿಣ ಮತ್ತು ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುದುವರಿದಿದ್ದು, ಆಗಾಗ್ಗೆ ತುಂತುರು ಮಳೆಯಾಗುವ ಸಾಧ್ಯತೆಯಿದೆ . ಗರಿಷ್ಠ ತಾಪಮಾನ 25 ಡಿಗ್ರಿ, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


