ಬೆಂಗಳೂರು: ಶಾಲೆಗೆ ಹೋಗುವಂತೆ ಪೋಷಕರು ಹೇಳಿದ್ದಕ್ಕೆ 13 ವರ್ಷದ ಬಾಲಕ ಆತ್ಮಹತ್ಯೆ
ಶಾಲೆಗೆ ಹೋಗುವಂತೆ ಪೋಷಕರು ಹೇಳಿದ್ದಕ್ಕೆ 13 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು: ಶಾಲೆಗೆ ಹೋಗುವಂತೆ ಪೋಷಕರು ಹೇಳಿದ್ದಕ್ಕೆ 13 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬನಶಂಕರಿ ಎರಡನೇ ಹಂತದ ನಿವಾಸಿಯಾದ ವೆಂಕಟೇಶ್ ಎಂಬುವವರ ಮಗ ಶಾಲೆಗೆ ಹೋಗುವುದಕ್ಕೆ ಆಸಕ್ತಿ ತೋರುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಪೋಷಕರು ಆತನನ್ನು ಶಾಲೆಗೆ ಹೋಗುವಂತೆ ಹೇಳುತ್ತಿದ್ದರು. ಇದರಿಂದ ಬಾಲಕ ತೀವ್ರ ಖಿನ್ನತೆಗೊಳಗಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಪೋಷಕರು ಶಾಲೆಗೆ ಹೋಗುವಂತೆ ಹೇಳಿದ್ದರಿಂದ ಬೇಸರಗೊಂಡಿದ್ದ ಬಾಲಕ, ತಂದೆ-ತಾಯಿ ಕೆಲಸಕ್ಕೆ ಹೋಗಿದ್ದ ವೇಳೆಯಲ್ಲಿ ಸೀಲಿಂಗ್ ಫ್ಯಾನ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ, ಈ ಬಗ್ಗೆ ಬನಶಂಕರಿ ಪೊಲೀಸರು ಅಸಹಜ ಸಾವು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


