ಅನಾರೋಗ್ಯಕ್ಕೆ ಬೇಸತ್ತು ಯುವಕ ಆತ್ಮಹತ್ಯೆ
ಅನಾರೋಗ್ಯದಿಂದ ಬೇಸತ್ತು 25 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಗರದ ದೊಮ್ಮಲೂರುನಲ್ಲಿ ಮಂಗಳವಾರ ನಡೆದಿದೆ...

ಬೆಂಗಳೂರು; ಅನಾರೋಗ್ಯದಿಂದ ಬೇಸತ್ತು 25 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಗರದ ದೊಮ್ಮಲೂರುನಲ್ಲಿ ಮಂಗಳವಾರ ನಡೆದಿದೆ.
ಕಿರಣ್ (25) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಕೋಲಾರ ಮೂಲದ ಈ ಯುವಕ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡು ದೊಮ್ಮಲೂರಿನಲ್ಲಿ ಬಾಡಿಗೆ ಮನೆಯೊಂದರಲ್ಲಿ ತನ್ನ ಮೂವರು ಗೆಳೆಯರೊಂದಿಗೆ ಜೀವನ ನಡೆಸುತ್ತಿದ್ದನು. ಆದರೆ. ಪ್ರತೀ ದಿನ ಒಂದಲ್ಲ ಒಂದು ನೋವು ಕಾಡುತ್ತಿದ್ದ ಹಿನ್ನೆಲೆಯಲ್ಲಿ ಸಾಕಷ್ಟು ಬೇಸರಗೊಂಡಿದ್ದಾನೆ.
ಇದರಿಂದಾಗಿ ನಿನ್ನೆ ರಾತ್ರಿ ತೀವ್ರವಾಗಿ ನೊಂದಿದ್ದ ಯುವಕ ರಾತ್ರಿ 9.30 ಸುಮಾರಿಗೆ ತನ್ನ ಕೊಠಡಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲವು ಗಂಟೆಗಳ ನಂತರ ಗೆಳೆಯನೊಬ್ಬ ಕೊಠಡಿಗೆ ಬಂದು ಬಾಗಿಲು ತಟ್ಟಿದ್ದಾನೆ. ಈ ವೇಳೆ ಬಾಗಿಲು ತೆಗೆಯದ ಹಿನ್ನೆಲೆಯಲ್ಲಿ ಅನುಮಾನಗೊಂಡು ಬಾಗಿಲು ಮುರಿದು ಒಳ ಹೋದಾಗ ಕಿರಣ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ.
ಗಾಬರಿಗೊಂಡ ಆತ ಕೂಡಲೇ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸುವ ವೇಳೆ ಕಿರಣ್ ಬರೆದಿರುವ ಡೆತ್ ನೋಟ್ ಸಿಕ್ಕಿದೆ. ಡೆತ್ ನೋಟ್ ನಲ್ಲಿ ಕಿರಣ್ ನನಗೆ ದೃಷ್ಟಿ ದೋಷವಿದೆ. ಅಲ್ಲದೆ, ಎದೆ ನೋವು ಆಗಾಗ ಬರುತ್ತಿರುತ್ತದೆ. ನನ್ನಿಂದ ಬೇರೆಯವರಿಗೆ ತೊಂದರೆಯಾಗಬಾರದು. ನನ್ನ ಸಾವಿಗೆ ಯಾರು ಜವಾಬ್ದಾರರಲ್ಲ ಎಂದು ಹೇಳಿಕೊಂಡಿದ್ದಾನೆ. ಪ್ರಸ್ತುತ ಪ್ರಕರಣ ಇಂದಿರಾನಗರದಲ್ಲಿ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


