ರು. 505 ಕೋಟಿ ತೆರಿಗೆ ಸಂಗ್ರಹ ಮಾಡಿ; ಬಿಬಿಎಂಪಿಗೆ ಕೆಜೆ ಜಾರ್ಜ್ ತಾಕೀತು
ಮಾರ್ಚ್ 31 ಪ್ರಸಕ್ತ ವರ್ಷದ ಆಸ್ತಿ ತೆರಿಗೆ ಸಂಗ್ರಹಣೆಗೆ ಕೊನೆಯ ದಿನವಾಗಿದ್ದು, ಈ ಅವಧಿಯಲ್ಲಿ ಗುರಿ ತಲುಪಲು ಬಾಕಿ ಉಳಿದಿರುವ 505 ಕೋಟಿ ತೆರಿಗೆ...

ಬೆಂಗಳೂರು: ಮಾರ್ಚ್ 31 ಪ್ರಸಕ್ತ ವರ್ಷದ ಆಸ್ತಿ ತೆರಿಗೆ ಸಂಗ್ರಹಣೆಗೆ ಕೊನೆಯ ದಿನವಾಗಿದ್ದು, ಈ ಅವಧಿಯಲ್ಲಿ ಗುರಿ ತಲುಪಲು ಬಾಕಿ ಉಳಿದಿರುವ 505 ಕೋಟಿ ತೆರಿಗೆ ಸಂಗ್ರಹ ಮಾಡಬೇಕು ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳಿಗೆ ತಾಕೀತು ಮಾಡಿದರು.
2014–15ನೇ ಸಾಲಿನಲ್ಲಿ ರು 2,900 ಕೋಟಿ ಆಸ್ತಿ ತೆರಿಗೆ ಸಂಗ್ರಹದ ಗುರಿ ಹೊಂದಲಾಗಿತ್ತು. ಆದರೆ ಸಂಗ್ರಹವಾಗಿದ್ದು ರು. 1,810 ಕೋಟಿ. ಪ್ರಸಕ್ತ ಸಾಲಿನಲ್ಲಿ ಇಲ್ಲಿಯವರೆಗೆ ರು. 1784 ಕೋಟಿ ಸಂಗ್ರಹವಾಗಿದೆ’ ಎಂದು ವಿಶೇಷ ಆಯುಕ್ತೆ(ಕಂದಾಯ) ವಿ.ರಶ್ಮಿ ಅವರು ತಿಳಿಸಿದರು.
ಮಹಾದೇವಪುರ, ಬೊಮ್ಮನಹಳ್ಳಿ, ದಾಸರಹಳ್ಳಿಯಂತಹ ಹೊಸ ವಲಯಗಳಲ್ಲಿ ನೂರಾರು ವಾಣಿಜ್ಯ ಸಂಕೀರ್ಣಗಳು ನಿರ್ಮಾಣಗೊಳ್ಳುತ್ತಿವೆ. ಅದೇ ಪ್ರಮಾಣದಲ್ಲಿ ಆಸ್ತಿ ತೆರಿಗೆ ಹೆಚ್ಚಳವಾಗಬೇಕು. ಆದರೆ ಕಂದಾಯ ಅಧಿಕಾರಿಗಳು ಹೆಚ್ಚು ಮುತುವರ್ಜಿ ವಹಿಸಿ ಕೆಲಸ ಮಾಡುತ್ತಿಲ್ಲ ಎಂದು ಸಚಿವ ಜಾರ್ಜ್ ಅಸಮಾಧಾನ ವ್ಯಕ್ತಪಡಿಸಿದರು.
ಏಪ್ರಿಲ್ ತಿಂಗಳ ಮೊದಲನೇ ವಾರದಲ್ಲಿ ಪರಿಶೀಲನಾ ಸಭೆ ನಡೆಸಿ, ಸಾಧನೆ ತೋರದ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


