ಸಾಮೂಹಿಕ ಅತ್ಯಾಚಾರ; ಗ್ರಾಮ ಪಂಚಾಯಿತಿ ಸದಸ್ಯನ ವಿರುದ್ಧ ದೂರು
ತನ್ನ ಮೇಲೆ ಸಾಮೂಹಿಕ ಅತ್ಯಾಚಾರವಾಗಿದೆ ಎಂದು ಆರೋಪಿಸಿ ಗ್ರಾಮ ಪಂಚಾಯಿತಿ ಸದಸ್ಯನೊಬ್ಬನ ವಿರುದ್ಧ ಮಹಿಳೆಯೊಬ್ಬರು ದೂರು ದಾಖಲಿಸಿದ್ದಾರೆ.

ಬೆಂಗಳೂರು: ತನ್ನ ಮೇಲೆ ಸಾಮೂಹಿಕ ಅತ್ಯಾಚಾರವಾಗಿದೆ ಎಂದು ಆರೋಪಿಸಿ ಗ್ರಾಮ ಪಂಚಾಯಿತಿ ಸದಸ್ಯನೊಬ್ಬನ ವಿರುದ್ಧ ಮಹಿಳೆಯೊಬ್ಬರು ದೂರು ದಾಖಲಿಸಿದ್ದಾರೆ.
ಸುಮಾರು 36 ವರ್ಷದ ಮಹಿಳೆ ತನ್ನ ಮೇಲೆ ಸಾಮೂಹಿಕ ಅತ್ಯಾಚಾರವಾಗಿದೆ ಎಂದು ಆರೋಪಿಸಿ ಗ್ರಾಮ ಪಂಚಾಯಿತಿ ಸದಸ್ಯ ಸಂತೋಷ್ ರೆಡ್ಡಿ ಹಾಗೂ ಅವರ ಸ್ನೇಹಿತರ ವಿರುದ್ಧ ಎಚ್ ಎಸ್ಆರ್ ಲೇಲೌಟ್ ನಲ್ಲಿ ದೂರು ದಾಖಲಿಸಿದ್ದಾರೆ. ದೂರಿನಲ್ಲಿ " ಕೃಷ್ಣಪ್ಪ ಲೇಔಟ್ ನಲ್ಲಿರುವ ತಮ್ಮ ಮನೆಗೆ ಬಂದ ಗ್ರಾಮ ಪಂಚಾಯಿತಿ ಸದಸ್ಯ ಸಂತೋಷ್ ರೆಡ್ಡಿ ಹಾಗೂ ಅವರ ಸ್ನೇಹಿತರು ನನ್ನ ಮಗನ ಕಣ್ಣೆದುರೇ ನನ್ನನ್ನು ಬಲಾತ್ಕಾರ ಮಾಡಿದ್ದಾರೆ. ಅಲ್ಲದೇ ವೀಡಿಯೊ ಚಿತ್ರೀಕರಣ ಮಾಡಿಕೊಂಡಿದ್ದಾರೆ. ಈ ಘಟನೆ ಭಾನುವಾರ ರಾತ್ರಿ ನಡೆದಿದೆ ಎಂದು ಮಹಿಳೆ ಹೇಳಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಎಚ್ಎಸ್ಆರ್ ಲೇಔಟ್ ಪೊಲೀಸರು ಪ್ರಸ್ತುತ ಮೂವರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರನ್ನು ಗ್ರಾಮ ಪಂಚಾಯಿತಿ ಸದಸ್ಯ ಸಂತೋಷ್ ರೆಡ್ಡಿ, ಸುರೇಶ್ ಹಾಗೂ ಮಂಜುನಾಥ್ ಎಂದು ಗುರುತಿಸಲಾಗಿದೆ.
ಮಹಿಳೆ ಮೇಲೆ ಅಕ್ರಮ ಸಂಬಂಧ ಆರೋಪ
ಇದೇ ವೇಳೆ ಅತ್ತ ಎಚ್ ಎಸ್ ಆರ್ ಲೇಔಟ್ ಪೊಲೀಸರು ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಸಂತೋಷ್ ಮತ್ತು ಆತನ ಸ್ನೇಹಿತರನ್ನು ಬಂಧಿಸುತ್ತಿದ್ದಂತೆಯೇ ಇತ್ತ ಸಂತೋಷ್ ಸಂಬಂಧಿಕರು ಮಹಿಳೆ ವಿರುದ್ಧ ಅಕ್ರಮ ಸಂಬಂಧದ ಆರೋಪ ಮಾಡಿದ್ದಾರೆ. ದೂರು ನೀಡಿರುವ ಮಹಿಳೆ ಅಕ್ರಮ ಸಂಬಂಧ ಹೊಂದಿದ್ದು, ಈ ಬಗ್ಗೆ ಸಂತೋಷ್ ರೆಡ್ಡಿಗೆ ಹಲವು ದೂರುಗಳು ಬಂದಿದ್ದವು. ದೂರಿನ ಅನ್ವಯ ನಿನ್ನೆ ಮಹಿಳೆ ಮನೆಗೆ ತೆರಳಿದ ಸಂತೋಷ್ ರೆಡ್ಡಿ ವಿಚಾರಣೆ ನಡೆಸಿದ್ದರು. ಇದಾದ ಬಳಿಕ ಮಹಿಳೆಯೇ ಆತನ ಮೇಲೆ ದೂರು ದಾಖಲಿಸಿದ್ದಾಳೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


