ಅರಮನೆ ಮೈದಾನದಲ್ಲಿ ಸಚಿವ ಅನಂತ್ ಕುಮಾರ್ ಪುತ್ರಿ ಅದ್ಧೂರಿ ವಿವಾಹ
ಸಚಿವ ಅನಂತ್ ಕುಮಾರ್ ಅವರ ಪುತ್ರಿ ಐಶ್ವರ್ಯ ಮತ್ತು ದಿವ್ಯೇಶ್ ಅವರ ವಿವಾಹ ಶುಕ್ರವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ನೆರವೇರಿತು...

ಬೆಂಗಳೂರು: ಕೇಂದ್ರ ರಸಗೊಬ್ಬರ ಖಾತೆ ಸಚಿವ ಅನಂತ್ ಕುಮಾರ್ ಅವರ ಪುತ್ರಿ ಐಶ್ವರ್ಯ ಮತ್ತು ದಿವ್ಯೇಶ್ ಅವರ ವಿವಾಹ ಶುಕ್ರವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ನೆರವೇರಿತು.
ಮದುವೆ ಸಮಾರಂಭದಲ್ಲಿ ಹಲವು ಗಣ್ಯರು ಭಾಗಿಯಾಗಿ ನವ ದಂಪತಿಗೆ ಶುಭ ಕೋರಿದರು. ನಗರದ ಅರಮನೆ ಮೈದಾನದಲ್ಲಿ ನಡೆದ ವಿವಾಹಕ್ಕೆ ಹಲವು ಗಣ್ಯರು ಸಾಕ್ಷಿಯಾದರು.
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ರಾಜ್ಯಪಾಲ ವಿ.ಆರ್.ವಾಲಾ, ಗೋವಾ ರಾಜ್ಯಪಾಲ ಮೃದುಲಾ ಸಿನ್ಹಾ, ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಗುಜರಾತ್ ಸಿಎಂ ಆನಂದಿಬೆನ್ ಪಟೇಲ್, ಮಧ್ಯಪ್ರದೇಶ ಸಿಎಂ ಶಿವರಾಜ ಸಿಂಗ್ ಚವ್ಹಾಣ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಗಿರಿರಾಜ್ ಸಿಂಗ್, ರಾಜ್ಯ ಸಚಿವರಾದ ಕೆ.ಜೆ.ಜಾರ್ಜ್, ಡಿ.ಕೆ.ಶಿವಕುಮಾರ್, ಕಿಮ್ಮನೆ ರತ್ನಾಕರ, ಕೇಂದ್ರ ಮಾಜಿ ಸಚಿವ ಸಿ.ಕೆ.ಜಾಫರ್ ಷರೀಫ್, ಚಿತ್ರನಟ ಶಿವರಾಜ್ ಕುಮಾರ್ ಸೇರಿದಂತೆ ಹಲವು ಗಣ್ಯರು ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


