ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ
ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಬಸ್ ರಿವರ್ಸ್ ತೆಗೆದುಕೊಳ್ಳುವ ವೇಳೆ ಸಿಲುಕಿಕೊಂಡ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಶಿವಾಜಿನಗರದಲ್ಲಿ ಸೋಮವಾರ ನಡೆದಿದೆ...

ಬೆಂಗಳೂರು: ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಬಸ್ ರಿವರ್ಸ್ ತೆಗೆದುಕೊಳ್ಳುವ ವೇಳೆ ಸಿಲುಕಿಕೊಂಡ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಶಿವಾಜಿನಗರದಲ್ಲಿ ಸೋಮವಾರ ನಡೆದಿದೆ.
ಸರೋಜಮ್ಮ (55) ಮೃತ ಮಹಿಳೆ. ಈಕೆ ಬಿಎಂಟಿಸಿಯಲ್ಲಿ ಗುತ್ತಿಗೆದಾರಳಾಗಿ ಕಾರ್ಯನಿರ್ವಹಿಸುತ್ತಿದ್ದಳು. ಎಂದಿನಂತೆ ಇಂದೂ ಸಹ ಸರೋಜಮ್ಮ ಅವರು ಫ್ಲಾಟ್ ನಂ. 5ರಲ್ಲಿ ಸ್ವಚ್ಛತಾ ಕಾರ್ಯನಿರ್ವಹಿಸುತ್ತಿದ್ದರು. ಈ ವೇಳೆ ನಿಲ್ದಾಣಕ್ಕೆ ಬಂದ ನಂ. ಕೆಎ 01 ಎಫ್ 3165, ಡಿಪೋ 26ರ ಬಿಎಂಟಿಸಿ ಬಸ್ ಮುಂದೆ ಹೋಗಿದೆ. ಬಸ್ ಮುಂದೆ ಹೋಗಿದೆಯೆಂದು ಮಹಿಳೆ ತಮ್ಮ ಕೆಲಸವನ್ನು ಮುಂದುವರೆಸಿದ್ದಾರೆ. ಆದರೆ ಚಾಲಕ ಫ್ಲಾಟಂ ನಲ್ಲಿ ಬಸ್ ನಿಲ್ಲಿಸಲು ರಿವರ್ಸ್ ತೆಗೆದುಕೊಂಡಿದ್ದಾರೆ. ಈ ವೇಳೆ ಬಸ್ಸನ್ನು ಗಮನಿಸದ ಸರೋಜಮ್ಮ ಅವರು ಬಸ್ಸಿನ ಕೆಳಗೆ ಸಿಲುಕಿಕೊಂಡು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.
ಪ್ರಸ್ತುತ ಸ್ಥಳಕ್ಕಾಗಮಿಸಿರುವ ಶಿವಾಜಿನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಚಾಲಕನನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ಸರೋಜಮ್ಮ ಅವರ ಮೃತದೇಹವನ್ನು ಬೌರಿಂಗ್ ಆಸ್ಪತ್ರೆಗೆ ಕಳುಹಿಸಲಾಗಿದೆ.
ಕಳೆದ ವಾರವಷ್ಟೇ ಇದೇ ರೀತಿಯ ಘಟನೆಯೊಂದು ನಡೆದಿತ್ತು. 18 ವರ್ಷದ ಪ್ಯಾರಮೆಡಿಕಲ್ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಯಶವಂತಪುರ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಫ್ಲಾಟ್ ಫಾರಂ ದಾಟುತ್ತಿದ್ದ ವೇಳೆ ಎರಡು ಬಸ್ ಗಳ ನಡುವೆ ಸಿಲುಕಿ ಮೃತಪಟ್ಟಿದ್ದಳು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


