ರಾಜ್ಯ

ಇನ್ಮುಂದೆ ಸರ್ಕಾರಿ ವೆಬ್ ಸೈಟ್ ಗಳಲ್ಲಿ ಮಾತ್ರ ಪಿಯು ಫಲಿತಾಂಶ ಪ್ರಕಟ

ಈ ವರ್ಷದಿಂದ ದ್ವಿತೀಯ ಪಿಯು ಫಲಿತಾಂಶ ಸರಕಾರಿ ವೆಬ್‌ಸೈಟ್‌ಗಳಲ್ಲಿ ಮಾತ್ರವೇ ದೊರೆಯಲಿದೆ. ಕಳೆದ ವರ್ಷ ಖಾಸಗಿ ವೆಬ್‌ಸೈಟ್ ಪ್ರಕಟಿಸಿದ ತಪ್ಪು ...

ಇನ್ಮುಂದೆ ಸರ್ಕಾರಿ ವೆಬ್ ಸೈಟ್ ಗಳಲ್ಲಿ ಮಾತ್ರ ಪಿಯು ಫಲಿತಾಂಶ ಪ್ರಕಟ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಈ ವರ್ಷದಿಂದ ದ್ವಿತೀಯ ಪಿಯು ಫಲಿತಾಂಶ ಸರಕಾರಿ ವೆಬ್‌ಸೈಟ್‌ಗಳಲ್ಲಿ ಮಾತ್ರವೇ ದೊರೆಯಲಿದೆ. ಕಳೆದ ವರ್ಷ ಖಾಸಗಿ ವೆಬ್‌ಸೈಟ್ ಪ್ರಕಟಿಸಿದ ತಪ್ಪು ಫಲಿತಾಂಶದಿಂದಾಗಿ ವಿದ್ಯಾರ್ಥಿಗಳಲ್ಲಿ ಗೊಂದಲವುಂಟಾಗಿತ್ತು. ಈ ಹಿನ್ನೆಲೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಖಾಸಗಿ ವೈಬ್‌ಸೈಟ್‌ಗಳಿಗೆ ಫಲಿತಾಂಶ ನೀಡುವ ಬದಲು ಸರಕಾರಿ ವೆಬ್‌ಸೈಟ್‌ನಲ್ಲಿ ಮಾತ್ರವೇ ಪ್ರಕಟಿಸಲಿದೆ.

ಈ ಬಾರಿ ಆರು ಲಕ್ಷ ವಿದ್ಯಾರ್ಥಿಗಳು ಫಲಿತಾಂಶ ನೋಡಲಿದ್ದು, ಒಂದೇ ವೆಬ್‌ಸೈಟ್‌ನಲ್ಲಿ ನೋಡುವುದು ಕಷ್ಟವಾಗುತ್ತದೆ ಎಂಬ ಕಾರಣಕ್ಕೆ ಸರಕಾರದಿಂದಲೇ ಪರ್ಯಾಯ ವೈಬ್‌ಸೈಟ್‌ಗಳಲ್ಲಿ ಪ್ರಕಟಿಸುವ ಆಲೋಚನೆಯಲ್ಲಿದೆ. ಅದಕ್ಕಾಗಿ ಎಸ್‌ಎಸ್‌ಎಲ್‌ಸಿ ಮಂಡಳಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ), ಬೆಂಗಳೂರು ವಿವಿ, ಡಿಎಸ್‌ಇಆರ್‌ಟಿ, ಸಾರ್ವಜನಿಕ ಶಿಕ್ಷಣ ಇಲಾಖೆ ಸೇರಿದಂತೆ ಶಿಕ್ಷಣ ಇಲಾಖೆಯ ನಾನಾ ವೆಬ್‌ಸೈಟ್‌ಗಳಲ್ಲಿ ಫಲಿತಾಂಶ ಪ್ರಕಟಿಸಲು ಚಿಂತನೆ ನಡೆಸಲಾಗಿದೆ ಎಂದು ಪಿಯು ಇಲಾಖೆ ಮೂಲಗಳು ತಿಳಿಸಿವೆ.

ಕಳೆದ ವರ್ಷ ಖಾಸಗಿ ವೆಬ್‌ಸೈಟ್, ಪಿಸಿಎಂಬಿ ವಿದ್ಯಾರ್ಥಿನಿಯೊಬ್ಬರ ಫಲಿತಾಂಶವನ್ನು ತಪ್ಪಾಗಿ ಪ್ರಕಟಿಸಿ ಗೊಂದಲಕ್ಕೆ ಕಾರಣವಾಗಿತ್ತು. ಅದಕ್ಕಾಗಿ ಪಿಯು ಇಲಾಖೆಯು ವೆಬ್‌ಸೈಟ್ ವಿರುದ್ಧ ದೂರು ದಾಖಲಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.