ಆರ್ ಟಿಇ ಅಡಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ-2009ರಡಿ ಉಚಿತ ಸೀಟು ನೀಡಿಕೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಸರ್ಕಾರ...

ಬೆಂಗಳೂರು: ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ-2009ರಡಿ ಉಚಿತ ಸೀಟು ನೀಡಿಕೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಸರ್ಕಾರ ಮುಂದೂಡಿದೆ. ಪ್ರವೇಶ ಬಯಸುವ ವಿದ್ಯಾರ್ಥಿಗಳು ಮಾರ್ಚ್ 22ರವರೆಗೆ ಅರ್ಜಿ ಸಲ್ಲಿಸಬಹುದು.
ಆರ್‌ಟಿಇ ಅರ್ಜಿ ಸಲ್ಲಿಕೆಗೆ ಈ ಮೊದಲು ಮಾರ್ಚ್ 15 ಕೊನೆಯ ದಿನವಾಗಿತ್ತು. ಈ ವರ್ಷ ಬಹುತೇಕ ಕಡೆ ನಿರೀಕ್ಷಿತ ಪ್ರಮಾಣದಲ್ಲಿ ಅರ್ಜಿಗಳು ಬಂದಿಲ್ಲ. ಜತೆಗೆ ಮಕ್ಕಳ ಪೋಷಕರು ಹಾಗೂ ಆರ್‌ಟಿಇ ಪಡೆಯವರು ಆರ್‌ಟಿಇ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ ಮಾಡುವಂತೆ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಕೆ ಗಡುವನ್ನು ಮಾರ್ಚ್ 22 ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಪ್ರಾಥಮಿಕ ಶಿಕ್ಷಣ ವಿಭಾಗದ ನಿರ್ದೇಶಕ ಕೆ. ಆನಂದ್ ಹೇಳಿದ್ದಾರೆ.
ಸಮಾಜದ ಬಡ ಮತ್ತು ನಿರ್ಗತಿಕ ಪೋಷಕರ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ 8ನೇ ತರಗತಿಯವರೆಗೆ ಉಚಿತವಾಗಿ ಶಿಕ್ಷಣ ಪಡೆಯುವ ಕೇಂದ್ರ ಸರ್ಕಾರದ ಯೋಜನೆ ಇದಾಗಿದೆ. ಕೆಲವು ಶಾಲೆಗಳಲ್ಲಿ ಎಲ್ ಕೆಜಿಗೆ ಪ್ರವೇಶವಿದ್ದರೆ ಇನ್ನು ಕೆಲವು ಶಾಲೆಗಳಲ್ಲಿ 1ನೇ ತರಗತಿಗೆ ಆರ್ ಟಿಇಯಡಿ ದಾಖಲಾತಿ ಮಾಡಿಕೊಳ್ಳಲಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


