ಮುಂದುವರೆದ ಬಲಿ: 'ಕಿಲ್ಲರ್' ಬಿಎಂಟಿಸಿಗೆ ಮತ್ತೊಂದು ಬಲಿ
ಮಹಿಳೆಯೋರ್ವರ ಮೇಲೆ ಬಿಎಂಟಿಸಿ ಬಸ್ ಹರಿದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಾಗಡಿ ರಸ್ತೆಯ ಪ್ರಸನ್ನ ಥಿಯೇಟರ್ ಬಳಿ ಬುಧವಾರ ನಡೆದಿದೆ...
ಬೆಂಗಳೂರು: ಮಹಿಳೆಯೋರ್ವರ ಮೇಲೆ ಬಿಎಂಟಿಸಿ ಬಸ್ ಹರಿದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಾಗಡಿ ರಸ್ತೆಯ ಪ್ರಸನ್ನ ಥಿಯೇಟರ್ ಬಳಿ ಬುಧವಾರ ನಡೆದಿದೆ.
ಸಿಲಿಕಾನ್ ಸಿಟಿಯಲ್ಲಿ ಬಿಎಂಟಿಸಿಯ ಬಲಿಗಳ ಸರಣಿ ಮುಂದುವರೆದಿದ್ದು, ಇಂದೂ ಕೂಡ ಓರ್ವ ಮಹಿಳೆಯನ್ನು ಬಲಿಪಡೆದುಕೊಂಡಿದೆ. ಇದರಂತೆ ಕಳೆದ 6 ದಿನಗಳಲ್ಲಿ ಬಿಎಂಟಿಸಿ ಮೂವರನ್ನು ಬಲಿ ಪಡೆದಿದೆ ಎನ್ನಲಾಗಿದೆ.
ಡಿವೈಡರ್ ದಾಟುವ ವೇಳೆ ಆಯತಪ್ಪಿ ಬಿದ್ದಿರುವ ಮಹಿಳೆ ಹಿಮ್ಮುಕವಾಗಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ರಸ್ತೆಯಲ್ಲಿ ವೇಗವಾಗಿ ಬರುತ್ತಿದ್ದ ಬಿಎಂಟಿಸಿ ಬಸ್ ಮಹಿಳೆ ಮೇಲೆ ಹರಿದಿದೆ. ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್ ನ ಸಂಖ್ಯೆ ಕೆಎ-01 ಎಫ್ ಎ 2192 ಎಂದು ಗುರ್ತಿಸಲಾಗಿದ್ದು, ಘಟನೆ ಬಳಿಕ ಬಸ್ ಚಾಲಕ ಹಾಗೂ ನಿರ್ವಾಹಕ ಸ್ಥಳದಿಂದ ಕಾಲ್ಕಿತ್ತಿದ್ದಾರೆ.
ಇದೀಗ ಮಾಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಹಿಳೆಯ ಮೃತದೇಹವನ್ನು ಶವಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಲಾಗಿದೆ.
ಮೃತ ಮಹಿಳೆ 30 ವರ್ಷದ ಅಂತರದಲ್ಲಿರಬಹುದೆಂದು ಪೊಲೀಸರು ಗುರ್ತಿಸಿದ್ದು, ಈ ವರೆಗೂ ಮಹಿಳೆಯ ಕುರಿತು ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

