ಬಿಜೆಪಿ ಕಾರ್ಯಕರ್ತ ರಾಜು ಹತ್ಯೆ ಖಂಡಿಸಿ ಪ್ರತಿಭಟನೆ; ಬಿಎಸ್‌ವೈ ಸೇರಿ ಹಲವರ ಬಂಧನ
ಬಿಜೆಪಿ ಕಾರ್ಯಕರ್ತ ರಾಜು ಹತ್ಯೆ ಖಂಡಿಸಿ ಹಾಗೂ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಬಿಜೆಪಿ ಗುರುವಾರ ಮೈಸೂರು ಜಿಲ್ಲಾಧಿಕಾರಿ...

Published On :
ಮೈಸೂರು: ಬಿಜೆಪಿ ಕಾರ್ಯಕರ್ತ ರಾಜು ಹತ್ಯೆ ಖಂಡಿಸಿ ಹಾಗೂ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಬಿಜೆಪಿ ಗುರುವಾರ ಮೈಸೂರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿತು. ಈ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮೂವರು ಸಂಸದರು ಸೇರಿದಂತೆ ಹಲವು ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು.
ರಾಜು ಹತ್ಯೆಯನ್ನು ಖಂಡಿಸಿ ಇಂದು ಜಿಲ್ಲಾಧಿಕಾರಿ ಕಚೇರಿ ಬಳಿ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ಮಾಜಿ ಸಚಿವ ರಾಮ್‌ದಾಸ್ ಹಾಗೂ ಪ್ರತಾಪ್ ಸಿಂಹ ಭಾಗವಹಿಸಿದ್ದರು. ಪ್ರತಿಭಟನೆ ಆರಂಭಿಸುವುದಕ್ಕು ಮುನ್ನ ರಾಜು ಅವರ ಕ್ಯಾತಮಾರನಹಳ್ಳಿಯಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡರು ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿ, ಪಕ್ಷದ ವತಿಯಿಂದ 5 ಲಕ್ಷ ರೂಪಾಯಿ ಪರಿಹಾರ ಧನದ ಚೆಕ್ ವಿತರಿಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ರಾಜು ಹತ್ಯೆಯಾಗಿ ಮೂರು ದಿನ ಕಳೆದರೂ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ. ರಾಕ್ಷಸರ ರೀತಿ ರಾಜು ಅವರನ್ನು ಹತ್ಯೆ ಮಾಡಿದ್ದಾರೆ. ಕೆಎಫ್ ಡಿ ಹಾಗೂ ಪಿಪಿಐ ಸಂಘಟನೆಗಳೇ ಈ ಕೊಲೆ ಮಾಡಿದ್ದು ಎಂದು ಆರೋಪಿಸಿದರು. ಅಲ್ಲದೆ ಈ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರಹೊಣೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವುದು ಈ ಘಟನೆಯಿಂದ ಕಂಡು ಬಂದಿದೆ. ಸರ್ಕಾರ ಆರೋಪಿಗಳ ರಕ್ಷಣೆಗೆ ಯತ್ನಿಸುತ್ತಿದೆ ಎಂದು ಕಿಡಿಕಾರಿದರು.
ಪ್ರತಿಭಟನೆ ಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ,ಸಂಸದೆ ಶೋಭಾ ಕರಂದ್ಲಾಜೆ, ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ ರಾಮ್‌ದಾಸ್ ,ಹಲವು ಮಖಂಡರು ಸೇರಿದಂತೆ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


