2018ರ ವೇಳೆಗೆ ರೈತರ ಪಂಪ್ ಸೆಟ್ ಗಳಿಗೆ ಹಗಲು ಹೊತ್ತು ವಿದ್ಯುತ್: ಡಿಕೆ ಶಿವಕುಮಾರ್
2018ರ ವೇಳೆಗೆ ರೈತರಿಗೆ ಹಗಲು ಹೊತ್ತಿನಲ್ಲಿಯೂ ವಿದ್ಯುತ್ ಒದಗಿಸುವ ನಿಟ್ಟಿನಲ್ಲಿ ಪ್ರತಿ ತಾಲೂಕಿನಲ್ಲಿ 20 ಮೆಗಾವ್ಯಾಟ್ ಸೌರ ವಿದ್ಯುತ್ ಉತ್ಪಾದಿಸಲು ಯೋಜನೆ...

ಹುಬ್ಬಳ್ಳಿ: 2018ರ ವೇಳೆಗೆ ರೈತರಿಗೆ ಹಗಲು ಹೊತ್ತಿನಲ್ಲಿಯೂ ವಿದ್ಯುತ್ ಒದಗಿಸುವ ನಿಟ್ಟಿನಲ್ಲಿ ಪ್ರತಿ ತಾಲೂಕಿನಲ್ಲಿ 20 ಮೆಗಾವ್ಯಾಟ್ ಸೌರ ವಿದ್ಯುತ್ ಉತ್ಪಾದಿಸಲು ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಹೆಸ್ಕಾಂ ಕೇಂದ್ರ ಕಚೇರಿಯಲ್ಲಿ ಗ್ರಾಹಕರ ದೂರುಗಳ ಸಹಾಯವಾಣಿ (1912)ಗೆ ಚಾಲನೆ ನೀಡಿ ಮಾತನಾಡಿದ ಅವರು, ಈಗಾಗಲೇ 60 ತಾಲೂಕುಗಳಲ್ಲಿ ಸೌರವಿದ್ಯುತ್ ಉತ್ಪಾದನೆಗೆ ಟೆಂಡರ್ ನೀಡಲಾಗಿದ್ದು, ಮೊದಲ ಹಂತದಲ್ಲಿ 1200 ಮೆಗಾವ್ಯಾಟ್ ಸೌರ ವಿದ್ಯುತ್ ಉತ್ಪಾದನೆ ಮಾಡಲಾಗುವುದು ಎಂದರು.
ರಾಯಚೂರು ಉಷ್ಣ ವಿದ್ಯುತ್ ಘಟಕಕ್ಕೆ ನೀರಿನ ಸಮಸ್ಯೆ ಉಂಟಾಗಿದೆ. ಬರಗಾಲದಿಂದಾಗಿ ನದಿಗಳಲ್ಲಿನ ನೀರಿನ ಪ್ರಮಾಣ ಕಡಿಮೆಯಾಗಿದ್ದರಿಂದ ಸಮಸ್ಯೆಯಾಗಿದೆ. ಆದರೆ ಕಲ್ಲಿದ್ದಲು ಕೊರತೆಯಿಲ್ಲ. ಮೊದಲು 2-3 ದಿನಗಳ ಕಲ್ಲಿದ್ದಲು ಸಂಗ್ರಹ ಇಟ್ಟುಕೊಳ್ಳಲಾಗುತ್ತಿತ್ತು. ಈಗ 20 ದಿನಗಳಿಗಾಗುವಷ್ಟು ಕಲ್ಲಿದ್ದಲು ಸಂಗ್ರಹ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಪರೀಕ್ಷಾ ಸಮಯದಲ್ಲಿ ವಿದ್ಯುತ್ ಕಡಿತ ಮಾಡಿ ವಿದ್ಯಾರ್ಥಿಗಳಿಗೆ ತೊಂದರೆ ನೀಡುವ ಉದ್ದೇಶವಿಲ್ಲ. ಶಾಲೆ-ಕಾಲೇಜುಗಳ ಪರೀಕ್ಷೆಗಳು ನಡೆಯುತ್ತಿರುವುದರಿಂದ ವಿದ್ಯುತ್ ಕಡಿತ ಮಾಡುವುದಿಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


