ರಾಜ್ಯ

ಆನ್ ಲೈನ್ ಮೂಲಕ ಎಲ್ ಎಲ್, ಡಿಎಲ್ ಸೌಲಭ್ಯ: ರಾಮಲಿಂಗಾ ರೆಡ್ಡಿ

ಸಾರಿಗೆ ಇಲಾಖೆಗೆ ಸಂಬಂಧಿಸಿದ ಎಲ್ಲಾ ಕೆಲಸಗಳು ಇನ್ನು ಮುಂದೆ ಆನ್ ಲೈನ್ ಮೂಲಕವೇ...

ಆನ್ ಲೈನ್ ಮೂಲಕ ಎಲ್ ಎಲ್, ಡಿಎಲ್ ಸೌಲಭ್ಯ: ರಾಮಲಿಂಗಾ ರೆಡ್ಡಿ
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
Published On :

ಬೆಂಗಳೂರು: ಸಾರಿಗೆ ಇಲಾಖೆಗೆ ಸಂಬಂಧಿಸಿದ ಎಲ್ಲಾ ಕೆಲಸಗಳು ಇನ್ನು ಮುಂದೆ ಆನ್ ಲೈನ್ ಮೂಲಕವೇ ಜನಸಾಮಾನ್ಯರಿಗೆ ಸಿಗಲಿದೆ.

ಯಲಹಂಕ ಉಪನಗರದ ಆರ್‌ಟಿಓ ಕಚೇರಿಯಲ್ಲಿ ಭಾರತ ಸರ್ಕಾರದ ರಸ್ತೆ ಮತ್ತು ಹೆದ್ದಾರಿ ಇಲಾಖೆಯು ಅಭಿವೃದ್ಧಿಪಡಿಸಿರುವ ಡ್ರೈವಿಂಗ್‌ ಲೈಸೆನ್ಸ್‌ ಸಂಬಂಧಿಸಿದ "ಸಾರಥಿ-4' ವ್ಯವಸ್ಥೆ ಅಡಿಯಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ ಕಾರ್ಯಕ್ರಮಕ್ಕೆ ಚಾಲನೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಾತನಾಡಿದರು.

ಆರ್‌ಟಿಓ ಕಚೇರಿಯ ಕೆಲಸಗಳಿಗಾಗಿ, ಚಾಲನಾಪತ್ರ ಪಡೆಯಲು ಆರ್‌ಟಿಓ ಕಚೇರಿಗೆ ಅಲೆಯುವುದು, ಮಧ್ಯವರ್ತಿಗಳ ಕಾಟ, ನಿಧಾನ ಪ್ರಕ್ರಿಯೆ ಇವುಗಳಿಂದ ಮುಕ್ತಿ ದೊರಕಲಿದೆ. ಆನ್‌ಲೈನ್‌ ವ್ಯವಸ್ಥೆಯಲ್ಲಿ ಮುಕ್ತವಾಗಿ ರಾಜ್ಯದ ಎಲ್ಲಾ 59 ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಯಾರು ಎಲ್ಲಿ ಬೇಕಾದರೂ ಅರ್ಜಿ ಸಲ್ಲಿಸಬಹುದು. ಚಾಲನಾ ಪರವಾನಿಗೆ ನೀಡುವ ದಿನದಂದು ಮಾತ್ರ ಕಚೇರಿಗೆ ಬಂದರೆ ಸಾಕಾಗುತ್ತದೆ ಎಂದರು.

ಆರಂಭದಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಈ ಯೋಜನೆ ಜಾರಿಗೆ ತಂದಿದ್ದು ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರಾರಂಭಿಸಲಾಗುವುದು. ಆರ್‌ಟಿಓ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳು ನಿಧಾನಗತಿ, ಲಂಚಗುಳಿತನ, ಅಲೆಯುವುದರ ಬಗ್ಗೆ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ರಾಜ್ಯದಲ್ಲಿ ಪ್ರಥಮವಾಗಿ ಇಲ್ಲಿ ಜಾರಿಗೆ ತರಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.